ಸೋಮವಾರ, ಫೆಬ್ರವರಿ 24, 2020
19 °C

ಶೇ100ರಷ್ಟು ಸಾಲ ಮರುಪಾವತಿಸಲು ಸಿದ್ಧ: ಮಲ್ಯ

(ಪಿಟಿಐ) Updated:

ಅಕ್ಷರ ಗಾತ್ರ : | |

Prajavani

ಲಂಡನ್‌: ಬ್ಯಾಂಕ್‌ಗಳಿಂದ ಪಡೆದ ಸಾಲವನ್ನು ಶೇ100ರಷ್ಟು ಮರುಪಾವತಿಸುತ್ತೇನೆ ಎಂದು ಉದ್ಯಮಿ ವಿಜಯ್‌ ಮಲ್ಯ ಸೋಮವಾರ ಟ್ವೀಟ್ ಮಾಡಿದ್ದಾರೆ.

ಜೆಟ್‌ ಏರ್‌ವೇಸ್‌ ಬಿಕ್ಕಟ್ಟಿನ ಕುರಿತು ವಿಷಾದ ವ್ಯಕ್ತಪಡಿಸಿರುವ ಅವರು, ’ನನಗೆ ಉದ್ಯಮದಲ್ಲಿ ನಷ್ಟ ಸಂಭವಿಸಿತ್ತು. ಬ್ಯಾಂಕ್‌ಗಳ ಸಾಲ ಮರುಪಾವತಿಸುತ್ತೇನೆ ಎಂದು ಭರವಸೆ ನೀಡಿದ್ದರೂ ನನ್ನ ವಿರುದ್ಧ ಮಾತ್ರ ಏಕೆ ಸಿಬಿಐ ಮತ್ತು ಜಾರಿ ನಿರ್ದೇಶನಾಲಯಗಳು ಕ್ರಿಮಿನಲ್‌ ಪ್ರಕರಣ ದಾಖಲಿಸಿವೆ‘ ಎಂದೂ ಅವರು ಟ್ವೀಟ್‌ನಲ್ಲಿ ಪ್ರಶ್ನಿಸಿದ್ದಾರೆ.

 ’ಕಿಂಗ್‌ಫಿಶರ್‌ ಏರ್‌ಲೈನ್ಸ್‌ ಸೇರಿದಂತೆ ಭಾರತದ ಹಲವು ವಿಮಾನಯಾನ ಸಂಸ್ಥೆಗಳು ಕುಸಿತ ಕಂಡಿವೆ. ಜೆಟ್‌ ಏರ್‌ವೇಸ್‌ ಕೂಡ ಕುಸಿತಕ್ಕೊಳಗಾಗಿರುವುದು ಚಿಂತಿಸಲಾಗದ ಸಂಗತಿ‘ ಎಂದಿದ್ದಾರೆ. ವಿಜಯ ಮಲ್ಯ ಅವರು ಭಾರತೀಯ ಬ್ಯಾಂಕ್‌ಗಳಿಗೆ ₹9 ಸಾವಿರ ಕೋಟಿ ಸಾಲ ಮರುಪಾವತಿಸದೆ ವಂಚಿಸಿರುವ ಆರೋಪ ಎದುರಿಸುತ್ತಿದ್ದಾರೆ.

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು