ಐಬಿಪಿಎಸ್ ತಿದ್ದುಪಡಿಗೆ ಉಪ ಮುಖ್ಯಮಂತ್ರಿ ಆಗ್ರಹ

7

ಐಬಿಪಿಎಸ್ ತಿದ್ದುಪಡಿಗೆ ಉಪ ಮುಖ್ಯಮಂತ್ರಿ ಆಗ್ರಹ

Published:
Updated:

ಬೆಂಗಳೂರು: ಬ್ಯಾಂಕಿಂಗ್‌ ನೇಮಕಾತಿ ಷರತ್ತುಗಳನ್ನು ಸಡಿಲಿಸುವ ಮೂಲಕ ಇನ್‌ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಪರ್ಸನಲ್ ಸೆಲೆಕ್ಷನ್‌ (ಐಬಿಪಿಎಸ್)ಗೆ ತಿದ್ದುಪಡಿ ತರುವಂತೆ ಒತ್ತಾಯಿಸಿ ಕೇಂದ್ರ ಹಣಕಾಸು ಸಚಿವ ಅರುಣ್‌ ಜೇಟ್ಲಿ ಅವರಿಗೆ ಉಪ ಮುಖ್ಯಮಂತ್ರಿ ಜಿ. ಪರಮೇಶ್ವರ ಪತ್ರ ಬರೆದಿದ್ದಾರೆ.

ಬ್ಯಾಂಕಿಂಗ್ ನೇಮಕಾತಿಯಲ್ಲಿ ಸ್ಥಳೀಯ ಭಾಷೆಗೆ ಆದ್ಯತೆ ನೀಡುವಂತೆ ಒತ್ತಾಯಿಸಿ ಈಗಾಗಲೇ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ, ರಾಜ್ಯಸಭಾ ಸದಸ್ಯ ಎಲ್. ಹನುಮಂತಯ್ಯ, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪ್ರೊ.ಎಸ್‌.ಜಿ. ಸಿದ್ಧರಾಮಯ್ಯ ಸೇರಿದಂತೆ ಹಲವರು‌ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದರೂ ಯಾವುದೇ ಪ್ರಯೋಜನವಾಗಿಲ್ಲ ಎಂದೂ ಅವರು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಹಿಂದಿ ಹಾಗೂ ಇಂಗ್ಲಿಷ್ ಭಾಷೆಯಲ್ಲಿ‌ ಮಾತ್ರ ಬ್ಯಾಂಕಿಂಗ್ ಪರೀಕ್ಷೆ ಬರೆಯಲು ಅವಕಾಶ ಇರುವುದರಿಂದ ಉತ್ತರ ಭಾರತದವರೇ ಕರ್ನಾಟಕ ಸೇರಿದಂತೆ ದಕ್ಷಿಣ ಭಾರತ ಎಲ್ಲ ಬ್ಯಾಂಕ್‌ನಲ್ಲಿ ಉದ್ಯೋಗ ಪಡೆದುಕೊಳ್ಳುತ್ತಿದ್ದಾರೆ.‌ ಹೀಗಾಗಿ ಸ್ಥಳೀಯ ಭಾಷೆಯಲ್ಲಿ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಬೇಕು. ಅಲ್ಲದೆ, ನೇಮಕಾತಿಯಲ್ಲಿ ಸ್ಥಳೀಯರಿಗೆ ಆದ್ಯತೆ ನೀಡಬೇಕು ಎಂದೂ ಅವರು ಪತ್ರದಲ್ಲಿ ಒತ್ತಾಯಿಸಿದ್ದಾರೆ.

ಬರಹ ಇಷ್ಟವಾಯಿತೆ?

  • 0

    Happy
  • 0

    Amused
  • 0

    Sad
  • 0

    Frustrated
  • 0

    Angry

Comments:

0 comments

Write the first review for this !