ಐಸಿಜೆಯಲ್ಲಿ ಇಂದಿನಿಂದ ವಿಚಾರಣೆ ಆರಂಭ

ಬುಧವಾರ, ಮೇ 22, 2019
24 °C
ಕುಲಭೂಷಣ್ ಜಾಧವ್‌ಗೆ ಗಲ್ಲುಶಿಕ್ಷೆ ಪ್ರಕರಣ

ಐಸಿಜೆಯಲ್ಲಿ ಇಂದಿನಿಂದ ವಿಚಾರಣೆ ಆರಂಭ

Published:
Updated:
Prajavani

ದಿ ಹೇಗ್‌: ಗೂಢಚಾರಿಕೆ ಮತ್ತು ಭಯೋತ್ಪಾದನಾ ಚಟುವಟಿಕೆ ಆರೋಪದಲ್ಲಿ ಬಂಧನಕ್ಕೊಳಗಾಗಿ ಪಾಕಿಸ್ತಾನದ ಸೇನಾ ನ್ಯಾಯಾಲಯ ಮರಣ ದಂಡನೆ ಶಿಕ್ಷೆಗೆ ಗುರಿಯಾಗಿರುವ ಭಾರತದ ನೌಕಾ ಪಡೆಯ ಮಾಜಿ ಅಧಿಕಾರಿ ಕುಲಭೂಷಣ್‌ ಜಾಧವ್‌ ಪ್ರಕರಣ ಕುರಿತ ವಿಚಾರಣೆ ಇಲ್ಲಿನ ಅಂತರರಾಷ್ಟ್ರೀಯ ನ್ಯಾಯಾಲಯ (ಐಸಿಜೆ)ದಲ್ಲಿ ಸೋಮವಾರದಿಂದ ಆರಂಭವಾಗಲಿದೆ.

ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾದಲ್ಲಿ ಪಾಕಿಸ್ತಾನದ  ಉಗ್ರರು ದಾಳಿ ನಡೆಸಿದ ನಂತರ ಉಭಯ ದೇಶಗಳ ನಡುವೆ ಸಂಘರ್ಷದ ವಾತಾವರಣ ಇರುವಾಗಲೇ ನಾಲ್ಕು ದಿನಗಳ ಜಾಧವ್ ವಿಚಾರಣೆ ಆರಂಭವಾಗಲಿದೆ.

ಭಾರತದ ಪರವಾಗಿ ವಕೀಲ ಹರೀಶ್‌ ಸಾಳ್ವೆ ಅವರು ಸೋಮವಾರ ಮೊದಲಿಗೆ ವಾದ ಮಂಡಿಸಲಿದ್ದಾರೆ. ಪಾಕಿಸ್ತಾನ ಸರ್ಕಾರದ ಪರ ವಕೀಲರು 19 ರಂದು ವಾದ ಮಂಡಿಸಲಿದ್ದಾರೆ. ಇದಕ್ಕೆ ಪ್ರತಿಕ್ರಿಯೆಯನ್ನು ಸಾಳ್ವೆ ಅವರು 20 ರಂದು ನೀಡಲಿದ್ದಾರೆ. 21 ರಂದು ಪಾಕಿಸ್ತಾನ ಕೊನೆಯದಾಗಿ ವಾದಿಸಲಿದೆ. ಈ ಬೇಸಿಗೆಯಲ್ಲಿ ಐಸಿಜೆ ತನ್ನ ತೀರ್ಪನ್ನು ನೀಡುವ ಸಾಧ್ಯತೆ ಇದೆ.

ಜಾಧವ್‌ ಅವರನ್ನು ಉಳಿಸಿಕೊಳ್ಳಲು ಎಲ್ಲಾ ಸಿದ್ಧತೆಯನ್ನು ಭಾರತ ಮಾಡಿಕೊಂಡಿದೆ ಎನ್ನಲಾಗುತ್ತಿದೆ. ಈ ಬಗ್ಗೆ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ರವೀಶ್ ಕುಮಾರ್‌ ಅವರು ಯಾವುದೇ ಮಾಹಿತಿಯನ್ನು ಬಹಿರಂಗ ಮಾಡಿಲ್ಲ.

 

ಇರ್ತಾರಾ ಮೋದಿ? ಬರ್ತಾರಾ ರಾಹುಲ್?

ಲೋಕಸಭೆ ಫಲಿತಾಂಶಕ್ಕಾಗಿ ವಿಶ್ವವೇ ಬೆರಗುಗಣ್ಣಿನಿಂದ ಕಾಯುತ್ತಿದೆ. ನರೇಂದ್ರ ಮೋದಿ ಗೆಲ್ತಾರಾ? ರಾಹುಲ್‌ ಗಾಂಧಿ ಬರ್ತಾರಾ? ರಾಜಕಾರಣದ ಕ್ಷಣಕ್ಷಣದ ಮಾಹಿತಿ, ತಾಜಾ ಅಪ್‌ಡೇಟ್‌ಗಳಿಗಾಗಿ www.prajavani.net/prajamatha ನೋಡಿ.

ಫೇಸ್‌ಬುಕ್‌ನಲ್ಲಿ ನಮ್ಮನ್ನು ಲೈಕ್ ಮಾಡಿ ಅಥವಾ ಟ್ವಿಟರ್, ಯೂಟ್ಯೂಬ್, ಇನ್‌ಸ್ಟಾಗ್ರಾಂನಲ್ಲಿ ಫಾಲೊ ಮಾಡಿ.

ತ್ವರಿತ ಸುದ್ದಿ, ನಿಖರ ವಿಶ್ಲೇಷಣೆಗೆ www.prajavani.net ಓದಿ. 'ಪ್ರಜಾವಾಣಿ' ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

  • 3

    Happy
  • 0

    Amused
  • 0

    Sad
  • 0

    Frustrated
  • 0

    Angry

Comments:

0 comments

Write the first review for this !