ಮಾತುಕತೆಗೆ ಮುಂದಾಗದ ಭಾರತ: ಇಮ್ರಾನ್‌ ಆರೋಪ

7

ಮಾತುಕತೆಗೆ ಮುಂದಾಗದ ಭಾರತ: ಇಮ್ರಾನ್‌ ಆರೋಪ

Published:
Updated:

ಇಸ್ಲಾಮಾಬಾದ್‌: ‘ಪಾಕಿಸ್ತಾನದ ಶಾಂತಿ ಮಾತುಕತೆ ಪ್ರಸ್ತಾಪಕ್ಕೆ ಭಾರತ ಸೂಕ್ತ ಪ್ರತಿಕ್ರಿಯೆ ನೀಡುತ್ತಿಲ್ಲ’ ಎಂದು ಪ್ರಧಾನಿ ಇಮ್ರಾನ್‌ ಖಾನ್ ದೂರಿದ್ದಾರೆ.

ಟರ್ಕಿಯ ಸುದ್ದಿ ಸಂಸ್ಥೆಗೆ ನೀಡಿದ ಸಂದರ್ಶನದಲ್ಲಿ ಇಮ್ರಾನ್‌ ಖಾನ್‌, ಭಾರತದೊಂದಿಗೆ ಶಾಂತಿ ಮಾತುಕತೆ ನಡೆಸುವ ಬಯಕೆಯನ್ನು ಮತ್ತೊಮ್ಮೆ ವ್ಯಕ್ತಪಡಿಸಿದ್ದಾರೆ.

‘ಪರಮಾಣು ಶಸ್ತ್ರಾಸ್ತ್ರಗಳನ್ನು ಹೊಂದಿರುವ ಎರಡು ದೇಶಗಳು ಶೀತಲ ಸಮರವನ್ನು ಬಯಸುವುದಿಲ್ಲ. ಏಕೆಂದರೆ ಅದರಿಂದ ಹಾನಿಯೇ ಹೆಚ್ಚು. ಪರಮಾಣು ಶಸ್ತ್ರಾಸ್ತ್ರಗಳನ್ನು ಹೊಂದಿರುವ ದೇಶಗಳ ನಡುವೆ ಯುದ್ಧ ನಡೆದರೆ ಅದು ಎರಡೂ ದೇಶಗಳನ್ನು ನಾಶ ಮಾಡುತ್ತದೆ’ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

‘ದ್ವಿಪಕ್ಷೀಯ ಮಾತುಕತೆಯಿಂದ ಮಾತ್ರವೇ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಲು ಸಾಧ್ಯ. ಒಂದು ಹೆಜ್ಜೆ ಮುಂದೆ ಬರುವಂತೆ ಭಾರತ ಹೇಳಿತ್ತು. ಆದರೆ ಪಾಕಿಸ್ತಾನ ಎರಡು ಹೆಜ್ಜೆ ಮುಂದೆ ಹೋದರೂ, ಮಾತುಕತೆಯ ಪ್ರಸ್ತಾಪವನ್ನು ಭಾರತ ಹಲವು ಬಾರಿ ತಿರಸ್ಕರಿಸಿದೆ’ ಎಂದು ಹೇಳಿದರು. 

‘ಕಾಶ್ಮೀರದ ಜನರ ಹಕ್ಕುಗಳನ್ನು ಹತ್ತಿಕ್ಕುವುದು ಭಾರತಕ್ಕೆ ಎಂದಿಗೂ ಸಾಧ್ಯವಾಗುವುದಿಲ್ಲ’ ಎಂದು ಇದೇ ವೇಳೆ ಅವರು ತಿಳಿಸಿದ್ದಾರೆ.

Tags: 

ಬರಹ ಇಷ್ಟವಾಯಿತೆ?

 • 2

  Happy
 • 0

  Amused
 • 0

  Sad
 • 0

  Frustrated
 • 1

  Angry

Comments:

0 comments

Write the first review for this !