ಸೋಮವಾರ, ಜನವರಿ 25, 2021
16 °C

ಗೋವಾ: ಬಿಜೆಪಿ ವಿರುದ್ಧದ ಮೈತ್ರಿ ಬೆಂಬಲಿಸಲು ಸಿದ್ಧ –ವಿಜಯ್ ಸರ್ ದೇಸಾಯಿ

ಪಿಟಿಐ Updated:

ಅಕ್ಷರ ಗಾತ್ರ : | |

ಪಣಜಿ: ಗೋವಾದಲ್ಲಿ 2022ರ ವಿಧಾನಸಭೆ ಚುನಾವಣೆಯಲ್ಲಿ, ಬಿಜೆಪಿ ವಿರುದ್ಧದ ಮೈತ್ರಿಕೂಟಕ್ಕೆ ಬೆಂಬಲಿಸಲು ತಾನು ಸಿದ್ಧನಿದ್ದೇನೆ ಎಂದು ಗೋವಾ ಫಾರ್ವರ್ಡ್ ಪಾರ್ಟಿಯ ಮುಖ್ಯಸ್ಥ ವಿಜಯ್ ಸರ್‌ದೇಸಾಯಿ ತಿಳಿಸಿದ್ದಾರೆ.

ಗೋವಾ ಚುನಾವಣೆಯಲ್ಲಿ ತಮ್ಮ ಪಕ್ಷವು ಕಾಂಗ್ರೆಸ್ ಮತ್ತು ಇತರೆ ಸಮಾನ ಮನಸ್ಕ ಪಕ್ಷಗಳ ಜೊತೆಗೆ ಮೈತ್ರಿ ಹೊಂದಲು ಸಿದ್ಧ ಎಂದು ಎನ್‌ಸಿಪಿ ಮುಖಂಡ ಪ್ರಫುಲ್‌ ಪಟೇಲ್‌ ಅವರ ಹೇಳಿಕೆಯ ಹಿಂದೆಯೇ ಈ ಮಾತು ಕೇಳಿಬಂದಿದೆ.

40 ಸದಸ್ಯ ಬಲದ ಗೋವಾ ವಿಧಾನಸಭೆಯಲ್ಲಿ ಎನ್‌ಸಿಪಿ ಒಂದು ಸ್ಥಾನ ಹೊಂದಿದೆ. ಈಚೆಗೆ ಎನ್‌ಸಿಪಿಯ ಪ್ರಫುಲ್ ಪಟೇಲ್ ಅವರು, ಇತರೆ ಪಕ್ಷಗಳ ವಿವಿಧ ಮುಖಂಡರ ನಮ್ಮೊಂದಿಗೆ ಸಂಪರ್ಕದಲ್ಲಿ ಇದ್ದಾರೆ ಎಂದು ತಿಳಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಸರ್ ದೇಸಾಯಿ ಅವರು, ‘2017ರ ಚುನಾವಣೆಯಲ್ಲಿ ಮೈತ್ರಿ ಸರ್ಕಾರ ರಚಿಸಲು ಕೊನೆಯ ಕ್ಷಣದವರೆಗೂ ನಾನುಯತ್ನಿಸಿದೆ ಎಂಬುದು ಸತ್ಯ. ಅದೇ ಸದ್ಯ 2022ರಲ್ಲಿಯೇ ಉಳಿಯಲಿದೆ. ಗೋವಾ ವಿರೋಧಿ ಸರ್ಕಾರವನ್ನು ಕಿತ್ತೊಗೆಯಲು ನಾನು ಬದ್ಧನಾಗಿದ್ದೇನೆ’ ಎಂದು ತಿಳಿಸಿದ್ದಾರೆ.

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು