ಮುಂಬೈ: ‘ಶಿವಸೇನಾ ಯುಪಿಎ ಭಾಗವಲ್ಲ. ಉಭಯ ಪಕ್ಷಗಳ ನಡುವಿನ ಮೈತ್ರಿ ಮಹಾರಾಷ್ಟ್ರಕ್ಕೆ ಮಾತ್ರ ಸೀಮಿತವಾಗಿದೆ’ ಎಂದು ಕಾಂಗ್ರೆಸ್ನ ಹಿರಿಯ ಮುಖಂಡ ಅಶೋಕ್ ಚವಾಣ್ ತಿಳಿಸಿದ್ದಾರೆ.

ಈ ಸಂಬಂಧ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯುಪಿಎ ನಾಯಕತ್ವದ ಕುರಿತು ಶಿವಸೇನಾ ಮಾತನಾಡುವುದು ಸರಿಯಲ್ಲ. ಮಹಾರಾಷ್ಟ್ರದಲ್ಲಿ ಶಿವಸೇನಾ ಜೊತೆಗಿನ ನಮ್ಮ ಮೈತ್ರಿ ಸಾಮಾನ್ಯ ಕನಿಷ್ಠ ಕಾರ್ಯಕ್ರಮವನ್ನು (ಸಿಎಂಪಿ) ಆಧರಿಸಿದೆ. ಹಾಗೆಯೇ ಇದು ಮಹಾರಾಷ್ಟ್ರಕ್ಕೆ ಮಾತ್ರ ಸೀಮಿತವಾಗಿದೆ’ ಎಂದರು.

‘ಶರದ್ ಪವಾರ್ ಅವರು ಯುಪಿಎ ಮುಖ್ಯಸ್ಥರಾಗಲಿದ್ದಾರೆ ಎಂಬ ಊಹಾಪೋಹಗಳನ್ನು ಸ್ವತಃ ಅವರೇ ಅಲ್ಲಗಳೆದಿದ್ದಾರೆ. ಯುಪಿಎಗೆ ಸೋನಿಯಾ ಗಾಂಧಿ ಅವರ ನಾಯಕತ್ವದ ಮೇಲೆ ನಂಬಿಕೆಯಿದ್ದು, ಈ ವಿಷಯದ ಕುರಿತ ಚರ್ಚೆ ಅನಗತ್ಯ’ ಎಂದರು.

ಕಾಂಗ್ರೆಸ್ ನೇತೃತ್ವದ ಯುಪಿಎ ಬಣದ ವ್ಯಾಪ್ತಿಯನ್ನು ವಿಸ್ತರಿಸಬೇಕೆಂದು ಶಿವಸೇನೆ ಸಂಸದ ಸಂಜಯ್ ರಾವತ್ ಕರೆ ನೀಡಿದ್ದರು. ಅಲ್ಲದೆ ಸೋನಿಯಾ ಗಾಂಧಿಯವರಂತೆ ಎನ್ಸಿಪಿ ಮುಖ್ಯಸ್ಥ ಶರದ್ ಪವಾರ್ ಅವರಿಗೂ ಪಕ್ಷದ ಎಲ್ಲರ ಬೆಂಬಲವಿದೆ ಎಂಬ ಹೇಳಿಕೆ ನೀಡಿದ್ದರು. ಅದರ ಬೆನ್ನಲ್ಲೇ ಚವಾಣ್ ಈ ರೀತಿ ಪ್ರತಿಕ್ರಿಯಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.