ನವದೆಹಲಿ: ಇಂದು ಮಂಡಿಸಬೇಕಿದ್ದ ದೆಹಲಿ ವಿಧಾನಸಭೆ ಬಜೆಟ್ ಅನ್ನು ಮಂಡಿಸಲಾಗುವುದಿಲ್ಲ ಎಂದು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ.
ಕೇಂದ್ರ ಸರ್ಕಾರ ನಮ್ಮ ಬಜೆಟ್ ಮಂಡನೆಯನ್ನು ನಿಲ್ಲಿಸಿದೆ ಎಂದು ಕೇಜ್ರಿವಾಲ್ ಆರೋಪಿಸಿದ್ದಾರೆ. ಈ ಬಗ್ಗೆ ಖಾಸಗಿ ಸುದ್ದಿ ವಾಹಿನಿಗೆ ನೀಡಿದ ಸಂದರ್ಶನದಲ್ಲಿ ಹೇಳಿದ್ದಾರೆ. ಇದೇ ಮಾಹಿತಿಯನ್ನು ಎಎಪಿ ಪಕ್ಷ ಸಹ ಟ್ವೀಟ್ ಮಾಡಿದೆ.
ದೆಹಲಿ ವಿಧಾನಸಭೆ ಬಜೆಟ್ ಅಧಿವೇಶನ ಮಾರ್ಚ್ 17ರಂದು ಆರಂಭವಾಗಿದೆ. ಮಾರ್ಚ್ 21ರಂದು ಬಜೆಟ್ ಮಂಡನೆಯಾಗಲಿದೆ ಎಂದು ಅಧಿಕಾರಿಗಳು ಹೇಳಿದ್ದರು. ಇದೀಗ ಸರ್ಕಾರ ಮತ್ತು ಗವರ್ನರ್ ಜನರಲ್ ಅವರ ನಡುವಿನ ಗುದ್ದಾಟದಿಂದ ಬಜೆಟ್ ಮಂಡನೆ ಮತ್ತೆ ಮುಂದಕ್ಕೆ ಹೋಗಿದೆ.
ಅಬಕಾರಿ ನೀತಿ ಹಗರಣದಲ್ಲಿ ಸಿಸೋಡಿಯಾ ಅವರು ಬಂಧನಕೊಳ್ಳಗಾದ ಬಳಿಕ ರಾಜೀನಾಮೆ ನೀಡಿದ್ದರು. ಈ ಬೆನ್ನಲ್ಲೇ ಹಣಕಾಸು ಖಾತೆ ವಹಿಸಿಕೊಂಡಿರುವ ಕಂದಾಯ ಸಚಿವ ಕೈಲಾಷ್ ಗಹ್ಲೋಟ್ ಈ ಬಾರಿ ಬಜೆಟ್ ಮಂಡನೆ ಮಾಡಲಿದ್ದಾರೆ.
ಕಳೆದ ಸಾಲಿನ ಬಜೆಟ್ ಅನ್ನು ಸಿಸೋಡಿಯಾ ಮಂಡಿಸಿದ್ದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.