ಸೋಮವಾರ, ಸೆಪ್ಟೆಂಬರ್ 27, 2021
22 °C

ಹಿಮಾಚಲ ಪ್ರದೇಶದಲ್ಲಿ ಭೂಕುಸಿತ: 10 ಮಂದಿ ಸಾವು, 13 ಮಂದಿ ರಕ್ಷಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಶಿಮ್ಲಾ: ಹಿಮಾಚಲ ಪ್ರದೇಶದ ಕಿನ್ನೌರ್‌ ಜಿಲ್ಲೆಯಲ್ಲಿ ಬುಧವಾರ ಭಾರೀ ಪ್ರಮಾಣದಲ್ಲಿ ಭೂಕುಸಿತ ಸಂಭವಿಸಿದೆ. ಇದರಿಂದಾಗಿ ಬಸ್‌ ಮತ್ತು ಇತರೆ ವಾಹನಗಳು ಸಿಲುಕಿಕೊಂಡಿದ್ದು, 10 ಮಂದಿ ಮೃತಪಟ್ಟಿದ್ದು, 13 ಮಂದಿಯನ್ನು ರಕ್ಷಿಸಲಾಗಿದೆ.

ಇದುವರೆಗೆ ಹತ್ತು ಶವಗಳನ್ನು ಹೊರತೆಗೆಯಲಾಗಿದೆ. 13 ಮಂದಿ ಗಾಯಾಳುಗಳನ್ನು ರಕ್ಷಿಸಿದ್ದು, ಸಮೀಪದ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ಜಿಲ್ಲಾಧಿಕಾರಿ ಅಬಿದ್‌ ಹುಸೇನ್‌ ಸಾದಿಖ್‌ ಹೇಳಿದ್ದಾರೆ.

ಅವಶೇಷಗಳ ಅಡಿಯಲ್ಲಿ ಮತ್ತಷ್ಟು ಮಂದಿ ಸಿಲುಕಿರುವ ಸಾಧ್ಯತೆಯಿದ್ದು, ರಾಜ್ಯ ವಿಪತ್ತು ನಿರ್ವಹಣಾ ಪಡೆ ಕಾರ್ಯಾಚರಣೆ ಮುಂದುವರಿಸಿದೆ.

ಇದನ್ನೂ ಓದಿ... ಹಿಮಾಚಲ ಪ್ರದೇಶದಲ್ಲಿ ಭೂಕುಸಿತ; ಅವಶೇಷಗಳ ಅಡಿಯಲ್ಲಿ 40 ಜನ ಪ್ರಯಾಣಿಕರಿದ್ದ ಬಸ್

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು