ಬುಧವಾರ, ಮೇ 18, 2022
23 °C

ಉತ್ತರ ಪ್ರದೇಶ: ಮನೆ ಕೆಲಸದವನಿಂದಲೇ 10 ತಿಂಗಳ ಮಗುವಿನ ಮೇಲೆ ಅತ್ಯಾಚಾರ

ಐಎಎನ್‌ಎಸ್‌ Updated:

ಅಕ್ಷರ ಗಾತ್ರ : | |

ಲಖನೌ: ಆಘಾತಕಾರಿ ಘಟನೆಯೊಂದರಲ್ಲಿ ಮನೆ ಕೆಲಸದವನಿಂದಲೇ ಅತ್ಯಾಚಾರಕ್ಕೆ ಒಳಗಾದ 10 ತಿಂಗಳ ಹೆಣ್ಣು ಮಗು ಗಂಭೀರವಾಗಿ ಗಾಯಗೊಂಡಿದೆ. ಸಾದತ್‌ಗಂಜ್ ಪ್ರದೇಶದಲ್ಲಿ ಭಾನುವಾರ ರಾತ್ರಿ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸದ್ಯ ಮಗುವನ್ನು ಕಿಂಗ್ ಜಾರ್ಜ್ ವೈದ್ಯಕೀಯ ವಿಶ್ವವಿದ್ಯಾಲಯದ ಮಕ್ಕಳ ಶಸ್ತ್ರಚಿಕಿತ್ಸೆ ವಿಭಾಗಕ್ಕೆ ದಾಖಲಿಸಲಾಗಿದೆ. ಮಗುವಿನ ಜನನಾಂಗಕ್ಕೆ ತೀವ್ರವಾಗಿ ಹಾನಿಯಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.

ಮಗುವಿನ ತಾಯಿಯು ಅಡುಗೆ ಮನೆಯಲ್ಲಿದ್ದಾಗ ಮಗು ಅಳುವುದು ಕೇಳಿಸಿದೆ. ಕೂಡಲೇ ಬೆಡ್ ರೂಂಗೆ ಬಂದು ನೋಡಿದಾಗ ಮನೆ ಕೆಲಸ ಮಾಡಿಕೊಂಡಿದ್ದ ಸನ್ನಿ ಎಂಬಾತ ಮಗುವಿನೊಂದಿಗೆ ಆಕ್ಷೇಪಾರ್ಹ ಸ್ಥಿತಿಯಲ್ಲಿರುವುದು ಕಂಡುಬಂದಿದೆ. ಈ ವೇಳೆ ಆತ ಅಲ್ಲಿಂದ ಪರಾರಿಯಾಗಿದ್ದಾನೆ.

ಬಳಿಕ ಮಗುವಿನ ಕುಟುಂಬದ ದೂರಿನ ಮೇರೆಗೆ ಆರೋಪಿಯನ್ನು ಸೋಮವಾರ ಬಂಧಿಸಲಾಗಿದ್ದು, ಅತ್ಯಾಚಾರ, ಲೈಂಗಿಕ ದೌರ್ಜನ್ಯ ಮತ್ತು ಪೊಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ ಎಂದು ಸಾದತ್‌ಗಂಜ್‌ ಪೊಲೀಸ್ ಠಾಣೆಯ ಠಾಣಾಧಿಕಾರಿ ಬ್ರಿಜೇಶ್ ಕುಮಾರ್ ಯಾದವ್ ತಿಳಿಸಿದ್ದಾರೆ.

ಮಗುವಿನ ಜನನಾಂಗಕ್ಕೆ ಹಾನಿಯಾಗಿದ್ದು, ಸದ್ಯ ಆರೋಗ್ಯ ಸ್ಥಿರವಾಗಿದೆ ಎಂದು ಮಕ್ಕಳ ಶಸ್ತ್ರಚಿಕಿತ್ಸೆ ವಿಭಾಗದ ಮುಖ್ಯಸ್ಥ ಪ್ರೊ ಜೆ.ಡಿ. ರಾವತ್ ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು