ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

10 ಕೋಟಿ ಕೊರ್ಬೆವ್ಯಾಕ್ಸ್‌ ಲಸಿಕೆ ಪೂರೈಕೆ: ಬಯೊಲಾಜಿಕಲ್‌ ಇ ಕಂಪನಿ

Last Updated 11 ಆಗಸ್ಟ್ 2022, 13:43 IST
ಅಕ್ಷರ ಗಾತ್ರ

ಹೈದರಾಬಾದ್‌: ಹತ್ತು ಕೋಟಿಕೊರ್ಬೆವ್ಯಾಕ್ಸ್‌ ಲಸಿಕೆಗಳನ್ನು ಕೇಂದ್ರ ಸರ್ಕಾರಕ್ಕೆ ಪೂರೈಕೆ ಮಾಡಲಾಗಿದೆ ಎಂದು ಬಯೊಲಾಜಿಕಲ್‌ ಇ ಕಂಪನಿ ಹೇಳಿದೆ.

‘12ರಿಂದ 14 ವಯೋಮಾನದ ಮಕ್ಕಳಿಗೆ ಕೊರ್ಬೆವ್ಯಾಕ್ಸ್‌ ಲಸಿಕೆ ನೀಡಿಕೆಯನ್ನು 2022ರ ಮಾರ್ಚ್‌ 16ರಿಂದ ಪ್ರಾರಂಭಿಸಲಾಗಿತ್ತು. ಅಲ್ಲಿಂದ ಇಲ್ಲಿಯ ವರೆಗೆ ಸುಮಾರು ಏಳು ಕೋಟಿ ಲಸಿಕೆಯನ್ನು ಪೂರೈಸಲಾಗಿದೆ. 2.9 ಕೋಟಿ ಮಕ್ಕಳು ಎರಡೂ ಡೋಸ್‌ ಕೋವಿಡ್‌ ಲಸಿಕೆಯನ್ನು ಪಡೆದುಕೊಂಡಿದ್ದಾರೆ’ ಎಂದು ಕಂಪನಿ ಪತ್ರಿಕಾ ಹೇಳಿಕೆ ನೀಡಿದೆ.

ಕೋವ್ಯಾಕ್ಸಿನ್‌ ಅಥವಾ ಕೋವಿಶೀಲ್ಡ್‌ ಲಸಿಕೆ ಪಡೆದುಕೊಂಡಿದ್ದರೂ, ತುರ್ತು ಸಂದರ್ಭಗಳಲ್ಲಿ ಬೂಸ್ಟರ್‌ ಡೋಸ್‌ಗಾಗಿ ಕೊರ್ಬೆವ್ಯಾಕ್ಸ್‌ ನೀಡಲು ಕೇಂದ್ರ ಆರೋಗ್ಯ ಸಚಿವಾಲಯವು ಬುಧವಾರ ಅನುಮತಿ ನೀಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT