ಸೋಮವಾರ, ಜನವರಿ 25, 2021
20 °C

ಕೇರಳದ 10,000 ಸರ್ಕಾರಿ ಕಚೇರಿಗಳನ್ನು ‘ಹಸಿರು ಕಚೇರಿ’ಗಳೆಂದು ಘೋಷಣೆ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ತಿರುವನಂತಪುರಂ: ಕೇರಳದಲ್ಲಿ ಸಾರ್ವಜನಿಕ ವಲಯದ ಸಂಸ್ಥೆಗಳು ಸೇರಿದಂತೆ ಒಟ್ಟು 10,000 ಸರ್ಕಾರಿ ಕಚೇರಿಗಳನ್ನು ಗಣರಾಜ್ಯೋತ್ಸವದ ದಿನದಂದು ‘ಹಸಿರು ಕಚೇರಿ’ಗಳು ಎಂದು ಘೋಷಿಸಲಾಗುತ್ತದೆ.

ಜನವರಿ 26 ರಂದು ನಡೆಯಲಿರುವ ವರ್ಚುವಲ್‌ ಕಾರ್ಯಕ್ರಮದಲ್ಲಿ ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್‌ ಅವರು ಈ ಘೋಷಣೆ ಮಾಡಲಿದ್ದಾರೆ.

‘ಈ ಬಗ್ಗೆ ಮುಖ್ಯಮಂತ್ರಿಗಳು ಅಧಿಕೃತವಾಗಿ ಘೋಷಿಸಿದ ಬಳಿಕ ಸರ್ಕಾರಿ ಕಚೇರಿಗಳಲ್ಲಿ ಕಾರ್ಯಕ್ರಮಗಳನ್ನು ನಡೆಸಲಾಗುವುದು. ಈ ವೇಳೆ ಸಂಸ್ಥೆಯ ಮುಖ್ಯಸ್ಥರು ಸರ್ಕಾರಿ ಕಚೇರಿಗಳಿಗೆ ಹಸಿರು ಪ್ರಮಾಣಪತ್ರವನ್ನು ವಿತರಿಸಲಿದ್ದಾರೆ’ ಎಂದು ಪ್ರಕಟಣೆ ತಿಳಿಸಿದೆ.

ಪರಿಸರ ಸ್ನೇಹಿ ಕಾರ್ಯಕ್ರಮಗಳಿಗೆ ಒತ್ತು ನೀಡುವ ಸಲುವಾಗಿ ಕೇರಳ ಸರ್ಕಾರ ಹರಿತ ಕೇರಳಂ ಮಿಷನ್‌ ಎಂಬ ಕಾರ್ಯಕ್ರಮ ಜಾರಿಗೊಳಿಸಿದೆ. ಈ ಕಾರ್ಯಕ್ರಮದಡಿ, ಸರ್ಕಾರಿ ಕಚೇರಿಗಳಲ್ಲಿ ಪ್ಲಾಸ್ಟಿಕ್‌ ಬಳಕೆಯನ್ನು ಸ್ಥಗಿತಗೊಳಿಸಲು ಉತ್ತೇಜನ ನೀಡಲಾಗುತ್ತದೆ. ಇಂಥ ಕ್ರಮಗಳನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸುವ ಕಚೇರಿಗಳನ್ನು ‘ಹಸಿರು’ ಕಚೇರಿಗಳೆಂದು ಘೋಷಿಸಲಾಗುತ್ತದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು