ಸೋಮವಾರ, ಮೇ 16, 2022
22 °C

ಮೂರು ವರ್ಷಗಳಲ್ಲಿ ಪಾಕಿಸ್ತಾನದಿಂದ 10,752 ಕದನ ವಿರಾಮ ನಿಯಮ ಉಲ್ಲಂಘನೆ

ಪಿಟಿಐ Updated:

ಅಕ್ಷರ ಗಾತ್ರ : | |

ನವದೆಹಲಿ: ಕಳೆದ ಮೂರು ವರ್ಷಗಳಲ್ಲಿ ಪಾಕಿಸ್ತಾನವು ಭಾರತದ ಗಡಿಯಲ್ಲಿ ಒಟ್ಟು 10,752 ಕದನ ವಿರಾಮ ನಿಯಮ ಉಲ್ಲಂಘನೆ ಮಾಡಿರುವುದಾಗಿ ಕೇಂದ್ರ ಸರ್ಕಾರವು ಲೋಕಸಭೆಗೆ ಮಾಹಿತಿ ಒದಗಿಸಿದೆ.

ಕದನ ವಿರಾಮ ನಿಯಮ ಉಲ್ಲಂಘಿಸಿ ಪಾಕಿಸ್ತಾನ ನಡೆಸಿರುವ ದಾಳಿಯಲ್ಲಿ 72 ಭದ್ರತಾ ಸಿಬ್ಬಂದಿಗಳು ಹುತಾತ್ಮರಾಗಿದ್ದು, 70 ನಾಗರಿಕರು ಮೃತಪಟ್ಟಿದ್ದಾರೆ ಎಂಬುದನ್ನು ತಿಳಿಸಿದೆ.

2018, 2019 ಹಾಗೂ 2020ನೇ ವರ್ಷಗಳಲ್ಲಿ ಜಮ್ಮು ಮತ್ತು ಕಾಶ್ಮೀರದಲ್ಲಿ ಅಂತರ ರಾಷ್ಟ್ರೀಯ ಗಡಿ ನಿಯಂತ್ರಣ ರೇಖೆಯ ಉದ್ದಕ್ಕೂ ಪಾಕಿಸ್ತಾನ ಕದನ ವಿರಾಮ ನಿಯಮ ಉಲ್ಲಂಘನೆಯಲ್ಲಿ 364 ಭದ್ರತಾ ಸಿಬ್ಬಂದಿಗಳು ಮತ್ತು 341 ನಾಗರಿಕರು ಗಾಯಗೊಂಡಿದ್ದಾರೆ ಎಂದು ಕೇಂದ್ರ ಗೃಹ ಇಲಾಖೆಯ ರಾಜ್ಯ ಸಚಿವ ಜಿ. ಕಿಶಾನ್ ರೆಡ್ಡಿ ತಿಳಿಸಿದರು.

ಇದನ್ನೂ ಓದಿ: 

1,452 ಉಗ್ರರ ದಾಳಿ...
ಕಳೆದ ಮೂರು ವರ್ಷಗಳಲ್ಲಿ ಜಮ್ಮು ಮತ್ತು ಕಾಶ್ಮೀರದಲ್ಲಿ 1,452 ಭಯೋತ್ಪಾದಕ ದಾಳಿ ನಡೆದಿರುವುದಾಗಿ ಕೇಂದ್ರ ಸಚಿವರು ಮಾಹಿತಿ ಒದಗಿಸಿದರು.

ಉಗ್ರರ ದಾಳಿಯಿಂದಾಗಿ 233 ಭದ್ರತಾ ಸಿಬ್ಬಂದಿಗಳು ಹುತಾತ್ಮರಾಗಿದ್ದು, 115 ನಾಗರಿಕರು ಮೃತಪಟ್ಟಿರುವುದಾಗಿ ಪ್ರಶ್ನೆಗೆ ಲಿಖಿತ ಉತ್ತರವಾಗಿ ತಿಳಿಸಿದರು.

ಅದೆ ಹೊತ್ತಿಗೆ ಕಳೆದ ಮೂರು ವರ್ಷಗಳಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ 635 ಉಗ್ರರನ್ನು ಹೊಡೆದುರುಳಿಸುವಲ್ಲಿ ಭದ್ರತಾ ಪಡೆಯು ಯಶಸ್ವಿಯಾಗಿದೆ. ಭಯೋತ್ಪಾದಕ ದಾಳಿಯಲ್ಲಿ ಒಟ್ಟು 484 ಭದ್ರತಾ ಸಿಬ್ಬಂದಿಗಳು ಹಾಗೂ 373 ನಾಗರಿಕರು ಗಾಯಗೊಂಡಿದ್ದಾರೆ ಎಂದು ತಿಳಿಸಿದರು.

ಗಡಿ ನಿಯಂತ್ರಣ ರೇಖೆಯಲ್ಲಿ ಪಾಕಿಸ್ತಾನ ಕದನ ವಿರಾಮ ನಿಯಮ ಉಲ್ಲಂಘನೆ ವಿರುದ್ಧ ಭಾರತ ತಕ್ಕ ಪ್ರತ್ಯುತ್ತರವನ್ನು ನೀಡುತ್ತಲೇ ಬಂದಿದೆ ಎಂದು ಸಚಿವರು ತಿಳಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು