ಶನಿವಾರ, ಮಾರ್ಚ್ 25, 2023
23 °C

ಮಹಾರಾಷ್ಟ್ರದಲ್ಲಿ ನಡೆದ ಎರಡು ಪ್ರತ್ಯೇಕ ಅಪಘಾತದಲ್ಲಿ 11 ಮಂದಿ ದುರ್ಮರಣ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮುಂಬೈ: ಮಹಾರಾಷ್ಟ್ರದ ಮುಂಬೈ– ಗೋವಾ ಹೆದ್ದಾರಿಯಲ್ಲಿ ಗುರುವಾರ ಸಂಭವಿಸಿದ ಎರಡು ಪ್ರತ್ಯೇಕ ಅಪಘಾತಗಳಲ್ಲಿ 11 ಮಂದಿ ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದಾರೆ. 

ರಾಯಗಡ ಜಿಲ್ಲೆಯ ರೆಪೋಲಿ ಹಾಗೂ ಸಿಂಧುದುರ್ಗ ಜಿಲ್ಲೆಯ ಕಣಕವಲಿಯಲ್ಲಿ ಅಪಘಾತಗಳು ಸಂಭವಿಸಿವೆ.

ರಾಯಗಡದಲ್ಲಿ ನಡೆದ ಕಾರು ಅಪಘಾತದಲ್ಲಿ ಒಂದೇ ಕುಟುಂಬದ ಒಂಬತ್ತು ಮಂದಿ ಮೃತಪಟ್ಟಿದ್ದು, 4 ವರ್ಷದ ಬಾಲಕನೊಬ್ಬ ಬದುಕುಳಿದಿದ್ದಾನೆ.

ಮುಂಬೈನಿಂದ ಗೋವಾಗೆ ತೆರಳುತ್ತಿದ್ದ ಬಸ್‌ವೊಂದು ಸಿಂಧುದುರ್ಗದ ಗಡ್ ನದಿಯ ಸೇತುವೆ ಬಳಿ ಉರುಳಿಬಿದ್ದು ಇಬ್ಬರು ಪ್ರಯಾಣಿಕರು ಸಾವಿಗೀಡಾಗಿದ್ದಾರೆ. ಘಟನೆಯಲ್ಲಿ 23 ಮಂದಿ ಗಾಯಗೊಂಡಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು