ಮಂಗಳವಾರ, ನವೆಂಬರ್ 30, 2021
21 °C

ಜಮ್ಮು-ಕಾಶ್ಮೀರ: ನುಸುಳುಕೋರರು ಒಳನುಸುಳುವಲ್ಲಿ 111 ಬಾರಿ ಯಶಸ್ವಿ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ವರ್ಷದಲ್ಲಿ ಗಡಿಯಾಚೆಯಿಂದ ಜಮ್ಮು ಮತ್ತು ಕಾಶ್ಮೀರಕ್ಕೆ ಒಳನುಸುಳುವ ನುಸುಳುಕೋರರ 111 ಪ್ರಯತ್ನಗಳು ಯಶಸ್ವಿಯಾಗಿವೆ ಎಂದು ಸರ್ಕಾರವು ಲೋಕಸಭೆಗೆ ಮಾಹಿತಿ ನೀಡಿದೆ. 

ಈ ಕುರಿತು ಲಿಖಿತ ಪ್ರತಿಕ್ರಿಯೆ ನೀಡಿರುವ ಗೃಹ ಇಲಾಖೆ ರಾಜ್ಯ ಖಾತೆ ಸಚಿವ ಜಿ. ಕಿಶನ್‌ ರೆಡ್ಡಿ, ಮಾರ್ಚ್‌ನಿಂದ ಆಗಸ್ಟ್‌ವರೆಗೆ 138 ಭಯೋತ್ಪಾದಕರನ್ನು ಭದ್ರತಾಪಡೆಗಳು ಹೊಡೆದುರುಳಿಸಿವೆ ಎಂದು ತಿಳಿಸಿದ್ದಾರೆ. 

2019ರ ಆಗಸ್ಟ್‌ನಿಂದ 2020ರ ಜುಲೈವರೆಗೆ ಜಮ್ಮು ಮತ್ತು ಕಾಶ್ಮೀರಕ್ಕೆ ನುಸುಳಲು 176 ಬಾರಿ ಪ್ರಯತ್ನಿಸಿದ್ದು, ಇದರಲ್ಲಿ 111 ಪ್ರಯತ್ನಗಳು ಯಶಸ್ವಿಯಾಗಿವೆ ಎಂದು ಉಲ್ಲೇಖಿಸಿದ್ದಾರೆ. ಮೂರು ದಶಕಗಳಿಂದ ಜಮ್ಮು ಮತ್ತು ಕಾಶ್ಮೀರ ಭಯೋತ್ಪಾದನೆಯಿಂದ ನಲುಗಿದೆ. ಇದಕ್ಕೆ ಗಡಿಯಾಚೆಗಿನ ರಾಷ್ಟ್ರ ಬೆಂಬಲ ನೀಡುತ್ತಿದೆ. ಭಯೋತ್ಪಾದನೆಯನ್ನು ಹತ್ತಿಕ್ಕಲು ಭದ್ರತಾ ಪಡೆಗಳು ನಿರಂತರವಾದ ಕ್ರಮಗಳನ್ನು ಕೈಗೊಳ್ಳುತ್ತಿದೆ’ ಎಂದು ರೆಡ್ಡಿ ತಿಳಿಸಿದ್ದಾರೆ. 

‘ಮಾ.1ರಿಂದ ಆ.31ರವರೆಗೆ ಭಯೋತ್ಪಾದಕರ ವಿರುದ್ಧದ ಕಾರ್ಯಾಚರಣೆಯಲ್ಲಿ, ಕದನ ವಿರಾಮ ಉಲ್ಲಂಘನೆಯಿಂದಾಗಿ ಹಾಗೂ ಗಡಿಯಲ್ಲಿನ ಗುಂಡಿನ ಚಕಮಕಿಗೆ 50 ಯೋಧರು ಹುತಾತ್ಮರಾಗಿದ್ದಾರೆ’ ಎಂದು ತಿಳಿಸಿದ್ದಾರೆ. 

ಹಿಮ್ಮೆಟ್ಟಿಸಿದ ಯೋಧರು (ಜಮ್ಮು): ಜಮ್ಮು ಮತ್ತು ಕಾಶ್ಮೀರದ ಸಾಂಬಾ ಜಿಲ್ಲೆಯಲ್ಲಿ ಸೋಮವಾರ ತಡರಾತ್ರಿ ಅಂತರರಾಷ್ಟ್ರೀಯ ಗಡಿಯಿಂದ ಭಾರಿ ಶಸ್ತ್ರಾಸ್ತ್ರಗಳೊಂದಿಗೆ ಒಳನುಸುಳಲು ಯತ್ನಿಸುತ್ತಿದ್ದ ಐವರು ಉಗ್ರರನ್ನು ಗಡಿ ಭದ್ರತಾ ಪಡೆ(ಬಿಎಸ್‌ಎಫ್‌) ಹಿಮ್ಮೆಟ್ಟಿಸಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು