ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

12ನೇ ತರಗತಿ ಪೂರಕ/ಖಾಸಗಿ ಅಭ್ಯರ್ಥಿಗಳ ಪರೀಕ್ಷೆ ರದ್ದು ಕೋರಿ ‘ಸುಪ್ರೀಂ’ಗೆ ಅರ್ಜಿ

Last Updated 19 ಜೂನ್ 2021, 13:32 IST
ಅಕ್ಷರ ಗಾತ್ರ

ನವದೆಹಲಿ: 12ನೇ ತರಗತಿಯ ಪೂರಕ ಪರೀಕ್ಷೆ ಮತ್ತು ಖಾಸಗಿ ಅಭ್ಯರ್ಥಿಗಳ ಪರೀಕ್ಷೆಗಳನ್ನು ರದ್ದುಪಡಿಸಲು ಕೇಂದ್ರೀಯ ಪ್ರೌಢಶಿಕ್ಷಣ ಮಂಡಳಿಗೆ (ಸಿಬಿಎಸ್‌ಇ) ನಿರ್ದೇಶನ ನೀಡುವಂತೆ ಕೋರಿ 1,152 ವಿದ್ಯಾರ್ಥಿಗಳು ಸುಪ್ರೀಂಕೋರ್ಟ್‌ ಮೊರೆ ಹೋಗಿದ್ದಾರೆ.

ಪೂರಕ ಮತ್ತು ಖಾಸಗಿ ಅಭ್ಯರ್ಥಿಗಳ ಪರೀಕ್ಷೆಗಳನ್ನು ಭೌತಿಕ ಕ್ರಮದಲ್ಲಿ ನಡೆಸಲು ಮಂಡಳಿ ಮುಂದಾಗಿರುವುದು ಅದರ ಇಬ್ಬಗೆಯ ನೀತಿಯಾಗಿದೆ ಎಂದು ಅರ್ಜಿದಾರರು ದೂರಿದ್ದಾರೆ.

‘12ನೇ ತರಗತಿಯ ಸಾಮಾನ್ಯ ವಿದ್ಯಾರ್ಥಿಗಳಿಗೆ ಫಲಿತಾಂಶ ಪ್ರಕಟಿಸಲು ಅನುಸರಿಸುವ ಮೌಲ್ಯಮಾಪನ ವಿಧಾನವನ್ನೇ ನಮಗೂ ಅನುಸರಿಸಿ, ತ್ವರಿತವಾಗಿ ಫಲಿತಾಂಶ ಪ್ರಕಟಿಸಲು ನಿರ್ದೇಶಿಸಬೇಕು’ ಎಂದು ಅರ್ಜಿಯಲ್ಲಿ ಕೋರಲಾಗಿದೆ.

‘ಪೂರಕ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳು ಮತ್ತು ಖಾಸಗಿ ಅಭ್ಯರ್ಥಿಗಳು ಭೌತಿಕವಾಗಿ ಪರೀಕ್ಷೆಗೆ ಹಾಜರಾಗಬೇಕು ಎಂಬ ಮಂಡಳಿಯ ನಿರ್ಧಾರವು, ಲಕ್ಷಾಂತರ ವಿದ್ಯಾರ್ಥಿಗಳ ಜೀವವನ್ನು ಅಪಾಯಕ್ಕೆ ಸಿಲುಕಿಸುತ್ತದೆ. ಅಲ್ಲದೆ ಅದು, ಸಂವಿಧಾನ ನೀಡಿರುವ ಜೀವಿಸುವ ಹಕ್ಕಿನ ಉಲ್ಲಂಘನೆಯಾಗುತ್ತದೆ‘ ಎಂದು ಅರ್ಜಿಯಲ್ಲಿ ಪ್ರತಿಪಾದಿಸಲಾಗಿದೆ. ಸುಪ್ರೀಂ ಕೋರ್ಟ್‌ ಈ ಕುರಿತ ವಿಚಾರಣೆಯಲ್ಲಿ ಸೋಮವಾರ ಕೈಗೆತ್ತಿಕೊಳ್ಳಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT