ಭಾನುವಾರ, ಮಾರ್ಚ್ 7, 2021
31 °C

116 ಮಂದಿಯಲ್ಲಿ ರೂಪಾಂತರ ಕೋವಿಡ್‌

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ದೇಶದಲ್ಲಿ ಇದುವರೆಗೆ 116 ಮಂದಿಯಲ್ಲಿ ರೂಪಾಂತರಗೊಂಡ ಕೋವಿಡ್‌–19 ಇರುವುದು ದೃಢಪಟ್ಟಿದೆ ಎಂದು ಆರೋಗ್ಯ ಸಚಿವಾಲಯ ಶನಿವಾರ ತಿಳಿಸಿದೆ.

ಆಯಾ ರಾಜ್ಯ ಸರ್ಕಾರಗಳು ಇವರೆಲ್ಲರನ್ನು ಪ್ರತ್ಯೇಕವಾಗಿರಿಸಿ ಆರೋಗ್ಯದ ಬಗ್ಗೆ ನಿಗಾವಹಿಸಿವೆ. ಈ ಎಲ್ಲ 116 ಮಂದಿಯ ಸಂಪರ್ಕಕ್ಕೆ ಬಂದವರನ್ನು ಸಹ ಕ್ವಾರಂಟೈನ್‌ ಮಾಡಲಾಗಿದೆ. ಇವರ ಜತೆ ಪ್ರಯಾಣಿಸಿದವರು ಮತ್ತು ಕುಟುಂಬದ ಸದಸ್ಯರನ್ನು ಸಹ ಪತ್ತೆ ಮಾಡಲಾಗುತ್ತಿದೆ ಎಂದು ಸಚಿವಾಲಯ ತಿಳಿಸಿದೆ.

ರೂಪಾಂತರಗೊಂಡ ಕೋವಿಡ್‌–19 ಹಬ್ಬದಂತೆ ಸಮೀಕ್ಷೆ ಮತ್ತು ಪರೀಕ್ಷೆ ಸೇರಿದಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವ ಕುರಿತು ರಾಜ್ಯ ಸರ್ಕಾರಗಳಿಗೆ ನಿಯಮಿತವಾಗಿ ನಿರ್ದೇಶನಗಳನ್ನು ನೀಡಲಾಗುತ್ತಿದೆ ಎಂದು ತಿಳಿಸಿದೆ.

ರೂಪಾಂತರಗೊಂಡ ಕೋವಿಡ್‌–19 ಡೆನ್ಮಾರ್ಕ್‌, ಆಸ್ಟ್ರೇಲಿಯಾ, ಇಟಲಿ, ಸ್ವೀಡನ್‌, ಫ್ರಾನ್ಸ್‌, ಸ್ಪೇನ್‌, ಸ್ವಿಟ್ಜರ್ಲೆಂಡ್‌, ಜರ್ಮನಿ, ಕೆನಡಾ, ಜಪಾನ್‌, ಸಿಂಗಪುರ, ಲೆಬನಾನ್‌ ಸೇರಿದಂತೆ ಹಲವು ದೇಶಗಳಲ್ಲಿ ಕಾಣಿಸಿಕೊಂಡಿದೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು