India Covid-19 Update: ಒಂದು ದಿನದಲ್ಲಿ 11,903 ಹೊಸ ಪ್ರಕರಣಗಳು, 311 ಸಾವು

ನವದೆಹಲಿ: ಬುಧವಾರ ಬೆಳಿಗ್ಗೆ ಕೊನೆಗೊಂಡ 24 ಗಂಟೆಗಳಲ್ಲಿ ದೇಶದಾದ್ಯಂತ 11,903 ಕೋವಿಡ್ ಸೋಂಕಿನ ಹೊಸ ಪ್ರಕರಣಗಳು ವರದಿಯಾಗಿದ್ದು, ಇದೇ ಅವಧಿಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 1,51,209ಕ್ಕೆ ಇಳಿಕೆಯಾಗಿದೆ.
ಇದು ಕಳೆದ 252 ದಿನಗಳಲ್ಲೇ ದಾಖಲಾಗಿರುವ ಅತಿ ಕಡಿಮೆ ಸಕ್ರಿಯ ಪ್ರಕರಣಗಳಾಗಿವೆ. ಕೋವಿಡ್ ಸೋಂಕಿನಿಂದ 311 ಮಂದಿ ಸಾವನ್ನಪ್ಪಿದ್ದು, ಇಲ್ಲಿವರೆಗೂ ಸೋಂಕಿನಿಂದ ಸತ್ತವರ ಸಂಖ್ಯೆ 4,59,191ಕ್ಕೆ ಏರಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಬುಧವಾರ ಬಿಡುಗಡೆ ಮಾಡಿರುವ ಪ್ರಕಟಣೆಯಲ್ಲಿ ತಿಳಿಸಿದೆ.
ಒಟ್ಟು ಪ್ರಕರಣಗಳಲ್ಲಿ ಸಕ್ರಿಯ ಪ್ರಕರಣಗಳ ಪ್ರಮಾಣ ಶೇ 0.44ರಷ್ಟಿದೆ. ಕಳೆದ 26 ದಿನಗಳಿಂದ ನಿರಂತರವಾಗಿ ಕೋವಿಡ್ ಹೊಸ ಪ್ರಕರಣಗಳ ಸಂಖ್ಯೆ ದಿನಕ್ಕೆ 20 ಸಾವಿರದೊಳಗೆ ವರದಿಯಾಗುತ್ತಿದೆ. ಸತತವಾಗಿ 129 ದಿನಗಳಿಂದ 50 ಸಾವಿರಕ್ಕಿಂತ ಕಡಿಮೆ ಸೋಂಕಿನ ಪ್ರಕರಣಗಳು ದಾಖಲಾಗುತ್ತಿವೆ.
India reports 11,903 new #COVID19 cases and 14,159 recoveries in last 24 hours; active caseload stands at 1,51,209 - lowest in 252 days
Total Recoveries 3,36,97,740 pic.twitter.com/qZjhGmhl9O
— ANI (@ANI) November 3, 2021
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.