ಭಾನುವಾರ, ಏಪ್ರಿಲ್ 2, 2023
33 °C

ಎನ್‌ಕೌಂಟರ್‌ ಪ್ರಕರಣ: 12 ಪೊಲೀಸರ ವಿರುದ್ಧ ದೂರು ದಾಖಲು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಲಖನೌ: ಸಹರಾನಪುರದಲ್ಲಿ ನಡೆದ ಎನ್‌ಕೌಂಟರ್‌ ಪ್ರಕರಣಕ್ಕೆ ಸಂಬಂಧಿಸಿದಂತೆ 12 ಪೊಲೀಸರ ವಿರುದ್ಧ ದೂರು ದಾಖಲಾಗಿದೆ.

ಪೊಲೀಸರು ಹಾಗೂ ಜಾನುವಾರು ಕಳ್ಳಸಾಗಣಿಕೆದಾರರ ನಡುವೆ ನಡೆದ ಎನ್‌ಕೌಂಟರ್‌ನಲ್ಲಿ ಜೀಶಾನ್‌ ಹೈದರ್‌ ಎಂಬ ವ್ಯಕ್ತಿ ಮೃತಪಟ್ಟಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದ ಆದೇಶದ ಮೇಲೆ 12 ಪೊಲೀಸರ ಮೇಲೆ ದೂರು ದಾಖಲಾಗಿದೆ.

ಇಲ್ಲಿನ ದಿಯೊಬಂದ್‌ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಪೊಲೀಸರು ಹಾಗೂ ಜಾನುವಾರು ಕಳ್ಳಸಾಗಣಿಕೆದಾರರ ನಡುವೆ ಗುಂಡಿನ ದಾಳಿ ನಡೆದಿತ್ತು. ಘಟನೆಯಲ್ಲಿ ಹೈದರ್‌ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದರು. 

ಪೊಲೀಸರು ಗೋಹತ್ಯೆ ಪ್ರಕರಣದಲ್ಲಿ ಸುಳ್ಳು ಆರೋಪ ಹೊರಿಸಿದ್ದಾರೆ ಎಂದು ಹೈದರ್‌ ಪತ್ನಿ, ಕುಟುಂಬಸ್ಥರು ಮತ್ತು ಗ್ರಾಮಸ್ಥರು ಆರೋಪ ಮಾಡಿದ್ದರು. ಈ ಪ್ರಕರಣದ ವಿಚಾರಣೆ ಇಲ್ಲಿನ ನ್ಯಾಯಾಲಯದಲ್ಲಿ ನಡೆಯುತ್ತಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು