ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉತ್ತರಪ್ರದೇಶ: ಬಾಲಕಿ ಮೇಲೆ ಅತ್ಯಾಚಾರ, ಕೊಲೆ– ಒಬ್ಬನ ಬಂಧನ

Last Updated 30 ಆಗಸ್ಟ್ 2020, 8:22 IST
ಅಕ್ಷರ ಗಾತ್ರ

ಮಹಾರಾಜಗಂಜ್ (ಉತ್ತರಪ್ರದೇಶ) : ಬಾಲಕಿಯ ಮೇಲೆ ಅತ್ಯಾಚಾರ ಎಸಗಿ ಹತ್ಯೆ ಮಾಡಿದ ಆರೋಪದಡಿ ವ್ಯಕ್ತಿಯೊಬ್ಬನನ್ನು ಬಂಧಿಸಲಾಗಿದೆ ಎಂದು ಪೊಲೀಸರು ಭಾನುವಾರ ತಿಳಿಸಿದರು.

ಶುಕ್ರವಾರದಿಂದ ನಾಪತ್ತೆಯಾಗಿದ್ದ 12 ವರ್ಷದ ಬಾಲಕಿಯ ಮೃತದೇಹವು ಸೊಹಗಿ ಬಾರ್ವಾ ವನ್ಯಜೀವಿ ಅಭಯಾರಣ್ಯದಲ್ಲಿ ಶನಿವಾರ ಸಂಜೆ ಪತ್ತೆಯಾಗಿದೆ ಎಂದು ಅವರು ಹೇಳಿದರು.

ಈ ಸಂಬಂಧ ಮನೋಜ್‌ ಪಾಸ್ವಾಬ್‌ ಎಂಬಾತನನ್ನು ಬಂಧಿಸಲಾಗಿದ್ದು, ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ. ಬಾಲಕಿಯ ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಕಳುಹಿಸಲಾಗಿದೆ ಎಂದು ಪೊಲೀಸ್‌ ವರಿಷ್ಠಾಧಿಕಾರಿ ರೋಹಿತ್‌ ಸಿಂಗ್‌ ಸಜ್ವಾನ್‌ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT