ಗುರುವಾರ , ಅಕ್ಟೋಬರ್ 28, 2021
19 °C

2020ರಲ್ಲಿ ರಸ್ತೆ ಅಪಘಾತಗಳಲ್ಲಿ 1.20 ಲಕ್ಷ ಮಂದಿ ಸಾವು: ಎನ್‌ಸಿಆರ್‌ಬಿ ವರದಿ

ಪಿಟಿಐ Updated:

ಅಕ್ಷರ ಗಾತ್ರ : | |

ನವದೆಹಲಿ: 2020ರಲ್ಲಿ ಕೋವಿಡ್‌ ಲಾಕ್‌ಡೌನ್‌ ಹೊರತಾಗಿಯೂ ಭಾರತದಲ್ಲಿ ಸಂಭವಿಸಿದ ರಸ್ತೆ ಅಪಘಾತಗಳಿಂದ 1.20 ಲಕ್ಷ ಮಂದಿ ಮೃತಪಟ್ಟಿರುವುದಾಗಿ ವರದಿಯಾಗಿದೆ. ಇದರಂತೆ ಪ್ರತಿ ದಿನ ಸರಾಸರಿ 328 ಜನರು ಜೀವ ಕಳೆದುಕೊಂಡಿದ್ದಾರೆ.

ಕಳೆದ ಮೂರು ವರ್ಷಗಳಲ್ಲಿ ನಿರ್ಲಕ್ಷ್ಯದಿಂದಾಗಿ ಸಂಭವಿಸಿದ ರಸ್ತೆ ಅಪಘಾತಗಳಲ್ಲಿ 3.92 ಲಕ್ಷ ಜನರು ಸಾವಿಗೀಡಾಗಿದ್ದಾರೆ ಎಂದು ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋ (ಎನ್‌ಸಿಆರ್‌ಬಿ) 2020ರ ತನ್ನ ವಾರ್ಷಿಕ 'ಕ್ರೈಮ್ ಇಂಡಿಯಾ' ವರದಿ ಬಿಡುಗಡೆ ಮಾಡಿದೆ.

ಅಂಕಿ–ಅಂಶಗಳ ಪ್ರಕಾರ, 2020ರಲ್ಲಿ 1.20 ಲಕ್ಷ ಸಾವುಗಳು ದಾಖಲಾಗಿವೆ. 2019ರಲ್ಲಿ 1.36 ಲಕ್ಷ ಮತ್ತು 2018ರಲ್ಲಿ 1.35 ಲಕ್ಷ ಸಾವುಗಳು ಸಂಭವಿಸಿವೆ.

ದೇಶದಲ್ಲಿ 2018ರಿಂದ ಈವರೆಗೆ 1.35 ಲಕ್ಷ ‘ಹಿಟ್ ಅಂಡ್ ರನ್’ ಪ್ರಕರಣಗಳನ್ನು ದಾಖಲಿಸಿದೆ ಎಂದು ಕೇಂದ್ರ ಗೃಹ ಸಚಿವಾಲಯದ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಎನ್‌ಸಿಆರ್‌ಬಿ ವರದಿಯಲ್ಲಿ ಉಲ್ಲೇಖಿಸಿದೆ.

‘ಹಿಟ್ ಅಂಡ್ ರನ್‌’ಗೆ ಸಂಬಂಧಿಸಿ 2020ರಲ್ಲಿ 41,196 ಪ್ರಕರಣಗಳು ದಾಖಲಾಗಿದ್ದರೆ, 2019ರಲ್ಲಿ 47,504 ಮತ್ತು 2018ರಲ್ಲಿ 47,028 ಪ್ರಕರಣಗಳು ವರದಿಯಾಗಿವೆ. ದೇಶದಾದ್ಯಂತ ಕಳೆದ ವರ್ಷ ಸರಾಸರಿ 112 ‘ಹಿಟ್ ಅಂಡ್ ರನ್‌’ ಪ್ರಕರಣಗಳು ವರದಿಯಾಗಿವೆ.

ಏತನ್ಮಧ್ಯೆ, 2020ರಲ್ಲಿ ಸಂಭವಿಸಿದ ರೈಲು ಅಪಘಾತಗಳಲ್ಲಿ 52 ಮಂದಿ ಮೃತಪಟ್ಟಿದ್ದಾರೆ. 2019ರಲ್ಲಿ 55 ಮತ್ತು 2018ರಲ್ಲಿ 35 ಸಾವು ಪ್ರಕರಣಗಳು ವರದಿಯಾಗಿವೆ.

2020ರಲ್ಲಿ ಭಾರತದಲ್ಲಿ ವೈದ್ಯಕೀಯ ಸಿಬ್ಬಂದಿ ನಿರ್ಲಕ್ಷ್ಯದಿಂದ 133 ಸಾವು ಪ್ರಕರಣಗಳು ದಾಖಲಾಗಿವೆ. ಇವು 2019ರಲ್ಲಿ 201 ಮತ್ತು 2018ರಲ್ಲಿ 218 ಪ್ರಕರಣಗಳಿದ್ದವು ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು