ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಮ್ಮು: ನಿರ್ಮಾಣ ಹಂತದ ಸೇತುವೆ ಕುಸಿತ, 13 ಮಂದಿಗೆ ಗಾಯ

Last Updated 2 ಜನವರಿ 2022, 15:41 IST
ಅಕ್ಷರ ಗಾತ್ರ

ಜಮ್ಮು: ಜಮ್ಮು ಮತ್ತು ಕಾಶ್ಮೀರದ ಸಾಂಬಾ ಜಿಲ್ಲೆಯಲ್ಲಿ ಭಾನುವಾರ ನಿರ್ಮಾಣ ಹಂತದಲ್ಲಿದ್ದ ಸೇತುವೆಯ ಕಬ್ಬಿಣದ ಕಟ್ಟು ಹಲಗೆಗಳು ಕುಸಿದು 13 ಮಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ರಾಮಗಡ-ಕೌಲ್‌ಪುರದಲ್ಲಿ ದೇವಿಕಾ ನದಿಯ ಮೇಲೆ ಗಡಿ ರಸ್ತೆಗಳ ಸಂಸ್ಥೆ (ಬಿಆರ್‌ಒ) ಪ್ರಮುಖ ಸೇತುವೆಯನ್ನು ನಿರ್ಮಿಸುತ್ತಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಅವಘಡ ಸಂಭವಿಸಿದಾಗ ಅಲ್ಲೇ ಇದ್ದ ಕಾರ್ಮಿಕರು ರಕ್ಷಣಾ ಕಾರ್ಯಾಚರಣೆಯ ನೇತೃತ್ವ ವಹಿಸಿದರು. ಬಳಿಕ ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲಾಯಿತು.

ಗಾಯಗೊಂಡವರ ಪೈಕಿ ಇಬ್ಬರ ಸ್ಥಿತಿ ಚಿಂತಾಜನಕವಾಗಿದ್ದು, ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಜಮ್ಮುವಿನ ಸರ್ಕಾರಿ ವೈದ್ಯಕೀಯ ಕಾಲೇಜಿಗೆ (ಜಿಎಂಸಿ) ಸ್ಥಳಾಂತರ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

ಘಟನೆ ಹಿಂದಿನ ಕಾರಣ ತಿಳಿದು ಬಂದಿಲ್ಲ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT