ಮಂಗಳವಾರ, ಜನವರಿ 31, 2023
26 °C

ಅಸ್ಸಾಂ: ಬಾಲಕಿ ಮೇಲೆ ಬಾಲಕರಿಂದ ಸಾಮೂಹಿಕ ಅತ್ಯಾಚಾರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕರೀಂಗಂಜ್‌ (ಪಿಟಿಐ): 13 ವರ್ಷ ವಯಸ್ಸಿನ ಬಾಲಕಿಯೊಬ್ಬಳ ಮೇಲೆ ಆರು ಮಂದಿ ಬಾಲಕರು ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ ಎನ್ನಲಾದ ಘಟನೆ ಅಸ್ಸಾಂನ ಕರೀಂಗಂಜ್‌ ಜಿಲ್ಲೆಯಲ್ಲಿ ನಡೆದಿದೆ. ಎಲ್ಲಾ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ.

ಜಿಲ್ಲೆಯ ರಾಮಕೃಷ್ಣ ನಗರ ಪ್ರದೇಶದಲ್ಲಿ ನವೆಂಬರ್‌ 1ರಂದು ಈ ಪ್ರಕರಣ ನಡೆದಿದೆ. ಆರೋಪಿಗಳೆಲ್ಲರೂ 13ರಿಂದ 15 ವರ್ಷ ವಯಸ್ಸಿನ ಒಳಗಿನವರು ಎಂದು ಪೊಲೀಸರು ತಿಳಿಸಿದ್ದಾರೆ. 

‘ಮನೆಯಲ್ಲಿ ಬಾಲಕಿ ಒಬ್ಬಳೇ ಇದ್ದ ವೇಳೆ ಆರೋಪಿಗಳು ಮನೆಯೊಳಗೆ ನುಗ್ಗಿದ್ದಾರೆ. ಒಬ್ಬರಾದ ಮೇಲೆ ಒಬ್ಬರು ಬಾಲಕಿ ಮೇಲೆ ಅತ್ಯಾಚಾರ ನಡೆಸಿದ್ದಾರೆ. ಅತ್ಯಾಚಾರದ ವಿಡಿಯೊವನ್ನೂ ಚಿತ್ರೀಕರಿಸಿ, ಆಕೆಯ ಮೇಲೆ ಹಲ್ಲೆ ನಡೆಸಿದ್ದಾರೆ’ ಎಂದು ಬಾಲಕಿಯ ಪೋಷಕರು ದೂರಿನಲ್ಲಿ ಮಾಹಿತಿ ನೀಡಿದ್ದಾರೆ.

ಭಾರತೀಯ ದಂಡ ಸಂಹಿತೆ (ಐಪಿಸಿ) ಮತ್ತು ಮಕ್ಕಳ ಮೇಲಿನ ದೈಹಿಕ ದೌರ್ಜನ್ಯ ತಡೆ ಕಾಯ್ದೆ– 2012 (ಪೋಸ್ಕೊ) ಅಡಿ ಹಲವಾರು ಮೊಕದ್ದಮೆಗಳನ್ನು ಆರೋಪಿಗಳ ವಿರುದ್ಧ ದಾಖಲಿಸಲಾಗಿದೆ. ಮೊಬೈಲ್‌ ಫೋನ್‌ನಲ್ಲಿ ಅವರು ಚಿತ್ರೀಕರಿಸಿದ್ದ ವಿಡಿಯೊವನ್ನು ಅಳಿಸಲಾಗಿದೆ. ರಕ್ತ ಮಾದರಿ ಮತ್ತು ಇತರ ಸಾಕ್ಷ್ಯಗಳನ್ನು ಸಂಗ್ರಹಿಸಿ ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ಕಳಿಸಲಾಗಿದೆ ಎಂದು ಪೊಲೀಸರು ತಿಳಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು