ಗುರುವಾರ , ಆಗಸ್ಟ್ 18, 2022
23 °C

ಉತ್ತರ ಪ್ರದೇಶದ ಉನ್ನಾವೊ ಜಿಲ್ಲಾಡಳಿತದ ಮಾನಸಿಕ ಕಿರುಕುಳ: 14 ವೈದ್ಯರ ರಾಜೀನಾಮೆ

ಪಿಟಿಐ‌ Updated:

ಅಕ್ಷರ ಗಾತ್ರ : | |

ಉನ್ನಾವೊ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಉನ್ನಾವೊ ಜಿಲ್ಲಾಡಳಿತದ ದುರ್ವರ್ತನೆ ಮತ್ತು ಮಾನಸಿಕ ಕಿರುಕುಳ ವಿರೋಧಿಸಿ ಸಮುದಾಯ ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಕೆಲಸ ಮಾಡುತ್ತಿದ್ದ 14 ಮಂದಿ ವೈದ್ಯರು ರಾಜೀನಾಮೆ ಸಲ್ಲಿಸಿದ್ದಾರೆ.

ರಾಜೀನಾಮೆಯ ಕುರಿತಂತೆ ಜಿಲ್ಲಾಧಿಕಾರಿ ಮತ್ತು ಮುಖ್ಯ ವೈದ್ಯಕೀಯ ಅಧಿಕಾರಿಗಳ ಜತೆಗೆ ಇದೀಗ ನಡೆಯುತ್ತಿರುವ ಮಾತುಕತೆಗೆಗಳು ಕೊನೆಗೊಳ್ಳುವ ತನಕ ಕೋವಿಡ್‌ ಸಂಬಂಧಿತ ಕೆಲಸಗಳಿಂದ ವಿಮುಖರಾಗುವುದಿಲ್ಲ ಎಂದು ಈ ವೈದ್ಯರು ಭರವಸೆ ನೀಡಿದ್ದಾರೆ.

ವೈದ್ಯರು ತಮ್ಮ ರಾಜೀನಾಮೆ ಪತ್ರಗಳ ಪ್ರತಿಗಳನ್ನು ಹೆಚ್ಚುವರಿ ಮುಖ್ಯ ಕಾರ್ಯದರ್ಶಿ (ಆರೋಗ್ಯ), ಮಹಾನಿರ್ದೇಶಕರು (ಆರೋಗ್ಯ) ಮತ್ತು ಇತರ ಹಿರಿಯ ಅಧಿಕಾರಿಗಳಿಗೆ ಕಳುಹಿಸಿಕೊಟ್ಟಿದ್ದಾರೆ.

‘ಗ್ರಾಮೀಣ ಪ್ರದೇಶಗಳ ಸೀಮಿತ ಸಂಪನ್ಮೂಲಗಳಲ್ಲಿಯೂ ನಾವು ಕಳೆದ ಒಂದು ವರ್ಷದಿಂದ ಕೆಲಸ ಮಾಡುತ್ತಿದ್ದೇವೆ. ನಮಗೆ ಸಹಕಾರ ನೀಡುವ ಬದಲಿಗೆ ಜಿಲ್ಲಾಧಿಕಾರಿ ಮತ್ತು ಮುಖ್ಯ ವೈದ್ಯಕೀಯ ಅಧಿಕಾರಿಗಳು ನಮ್ಮೊಂದಿಗೆ ದುರ್ವರ್ತನೆ ತೋರುತ್ತಿದ್ದಾರೆ;’ ಎಂದು ಡಾ.ಸಂಜೀವ್ ಎಂಬುವವರು ದೂರಿದರು.

‘ಹಲವು ಸಂದರ್ಭಗಳಲ್ಲಿ ನಮ್ಮ ಸಂಬಳವನ್ನೂ ತಡೆಹಿಡಿಯಲಾಗಿದೆ’ ಎಂದು ಅವರು ಆರೋಪಿಸಿದರು.

ಆದರೆ ಮುಖ್ಯ ವೈದ್ಯಕೀಯ ಅಧಿಕಾರಿ ಆಶುತೋಷ್‌ ಕುಮಾರ್ ಅವರು ಈ ಆರೋಪಗಳನ್ನು ಅಲ್ಲಗಳೆದಿದ್ದು, ವೈದ್ಯರೆಲ್ಲ ಕೆಲಸಕ್ಕೆ ಹಾಜರಾಗಿದ್ದಾರೆ ಎಂದು ಹೇಳಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು