ಬುಧವಾರ, ಜೂನ್ 29, 2022
24 °C

ಕೋವಿಡ್‌: ಕೇಂದ್ರ ಸರ್ಕಾರಿ ನೌಕರರಿಗೆ 15 ದಿನ ವಿಶೇಷ ರಜೆ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಪೋಷಕರು ಅಥವಾ ಕುಟುಂಬದ ಯಾವುದೇ ಅವಲಂಬಿತ ಸದಸ್ಯರಿಗೆ ಕೋವಿಡ್‌ ಇದ್ದರೆ ಕೇಂದ್ರ ಸರ್ಕಾರಿ ನೌಕರರು 15 ದಿನ ವಿಶೇಷ ಸಾಂದರ್ಭಿಕ ರಜೆ ತೆಗೆದುಕೊಳ್ಳಬಹುದು ಎಂದು ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ.

ವಿಶೇಷ ಸಾಂದರ್ಭಿಕ ರಜೆ (ಎಸ್‌ಸಿಎಲ್‌) ಅವಧಿ ಮುಗಿದ ನಂತರವೂ ಕುಟುಂಬದ ಸದಸ್ಯರು ಆಸ್ಪತ್ರೆಯಲ್ಲಿಯೇ ಚಿಕಿತ್ಸೆ ಪಡೆಯುತ್ತಿದ್ದರೆ, ಅವರು ಆಸ್ಪತ್ರೆಯಿಂದ ಬಿಡುಗಡೆಯಾಗುವವರೆಗೆ ಎಸ್‌ಸಿಎಲ್‌ ಹೊರತುಪಡಿಸಿ ಯಾವುದೇ ರೀತಿಯ ರಜೆ ಪಡೆಯಬಹುದು ಎಂದು ತಿಳಿಸಲಾಗಿದೆ.

ಕೋವಿಡ್‌ ದೃಢಪಟ್ಟ ವ್ಯಕ್ತಿಯೊಂದಿಗೆ ನೇರ ಸಂಪರ್ಕ ಹೊಂದಿರುವ ನೌಕರರು, ಹೋಂ ಕ್ವಾರಂಟೈನ್‌ ಆಗಿದ್ದರೆ ಅವರಿಗೆ ಏಳು ದಿನಗಳವರೆಗೆ ಮನೆಯಿಂದಲೇ ಕೆಲಸ ಮಾಡುವ ಅವಕಾಶ ನೀಡಲಾಗುವುದು ಎಂದೂ ಹೇಳಲಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು