ಬುಧವಾರ, ಜನವರಿ 27, 2021
21 °C

ಗಾಜಿಯಾಬಾದ್: ಸ್ಮಶಾನದಲ್ಲಿ ಚಾವಣಿ ಕುಸಿದು 15 ಮಂದಿ ಸಾವು

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಗಾಜಿಯಾಬಾದ್: ಮಳೆಯಿಂದ ರಕ್ಷಿಸಿಕೊಳ್ಳಲು ಆಶ್ರಯ ಪಡೆದಿದ್ದ ಸ್ಮಶಾನದ ಚಾವಣಿ ಕುಸಿದು 15 ಮಂದಿ ಸಾವನ್ನಪ್ಪಿದ ಘಟನೆ ಉತ್ತರ ಪ್ರದೇಶದ ಮುರಾದ್‌ನಗರದಲ್ಲಿ ಭಾನುವಾರ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಜೋರಾಗಿ ಬೀಳುತ್ತಿದ್ದ ಮಳೆಯಿಂದ ರಕ್ಷಣೆ ಪಡೆಯಲು ಸ್ಮಶಾನದ ಸಂಕೀರ್ಣವೊಂದರ ಚಾವಣಿಯಲ್ಲಿ 25 ಮಂದಿ ಆಶ್ರಯ ಪಡೆದಿದ್ದರು. ಮಳೆಗೆ ಚಾವಣಿ ಕುಸಿದು 15 ಮಂದಿ ಸಾವನ್ನಪ್ಪಿದ್ದಾರೆ. ಮೃತರಲ್ಲಿ ಬಹುತೇಕರು ರಾಮ್ ಧವನ್ ಎನ್ನುವವರ ಶವಸಂಸ್ಕಾರಕ್ಕೆ ಬಂದಿದ್ದ ಸಂಬಂಧಿಕರು. ಶವಸಂಸ್ಕಾರ ನಡೆಯುತ್ತಿದ್ದ ವೇಳೆಯೇ ಈ ದುರ್ಘಟನೆ ಸಂಭವಿಸಿದೆ.

ಸ್ಥಳದಲ್ಲಿ ರಕ್ಷಣಾ ಕಾರ್ಯ ಕೈಗೊಳ್ಳಲಾಗಿದ್ದು, ಮೃತದೇಹಗಳನ್ನು ಅವಶೇಷಗಳಿಂದ ಹೊರಕ್ಕೆ ತೆಗೆಯುವ ಕೆಲಸ ನಡೆಯುತ್ತಿದೆ. ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಗಾಜಿಯಾಬಾದ್ (ಗ್ರಾಮೀಣ) ಪೊಲೀಸ್ ವರಿಷ್ಠಾಧಿಕಾರಿ ಇರಾಜ್ ರಾಜಾ ತಿಳಿಸಿದ್ದಾರೆ.

ಘಟನೆಯಲ್ಲಿ ಮೃತಪಟ್ಟವರ ಬಗ್ಗೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಸಂತಾಪ ವ್ಯಕ್ತಪಡಿಸಿದ್ದು, ‘ಮೃತರ ಸಂಬಂಧಿಕರಿಗೆ ತಲಾ ₹ 2ಲಕ್ಷ ಪರಿಹಾರ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.