ಸೋಮವಾರ, ಜೂನ್ 21, 2021
21 °C

ಆಮ್ಲಜನಕ ಕೊರತೆ: ಗೋವಾದಲ್ಲಿ ಮತ್ತೆ 15 ಕೋವಿಡ್ ರೋಗಿಗಳ ಸಾವು

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಪಣಜಿ: ಗೋವಾದಲ್ಲಿ ಮತ್ತೆ 15 ಕೋವಿಡ್ ರೋಗಿಗಳು ಆಕ್ಸಿಜನ್ ಕೊರತೆಯಿಂದ ಅಸುನೀಗಿದ್ದಾರೆ. ಗುರುವಾರ ಮುಂಜಾನೆ ಗೋವಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ (ಜಿಎಂಸಿಎಚ್) ಹದಿನೈದು ಕೋವಿಡ್ -19 ರೋಗಿಗಳು ಸಾವನ್ನಪ್ಪಿದ್ದಾರೆ ಎಂದು ರಾಜ್ಯ ಸರ್ಕಾರ ಬಾಂಬೆ ಹೈಕೋರ್ಟ್‌ಗೆ ತಿಳಿಸಿದೆ.

2 ದಿನಗಳ ಹಿಂದೆ ಇದೇ ಆಸ್ಪತ್ರೆಯಲ್ಲಿ 26 ರೋಗಿಗಳು ಆಕ್ಸಿಜನ್ ಕೊರತೆಯಿಂದ ಮೃತಪಟ್ಟಿದ್ದರು.

ಜಿಎಂಸಿಎಚ್‌ನಲ್ಲಿ ಕೋವಿಡ್ -19 ರೋಗಿಗಳಿಗೆ ವೈದ್ಯಕೀಯ ಆಮ್ಲಜನಕವನ್ನು ಒದಗಿಸುವ ಆದೇಶದ ಹೊರತಾಗಿಯೂ, ಗುರುವಾರ ಸರ್ಕಾರ ನಡೆಸುತ್ತಿರುವ ಆಸ್ಪತ್ರೆಯಲ್ಲಿ ಮುಂಜಾನೆ 2 ರಿಂದ 6 ಗಂಟೆಯ ಸಮಯದಲ್ಲಿ 15 ಸಾವುಗಳು ಸಂಭವಿಸಿರುವುದನ್ನು ಹೈಕೋರ್ಟ್ ಗಂಭೀರವಾಗಿ ಪರಿಗಣಿಸಿದೆ.

ವೈದ್ಯಕೀಯ ಆಮ್ಲಜನಕದ ಕೊರತೆಯಿಂದಾಗಿ ಜಿಎಂಸಿಎಚ್‌ನಲ್ಲಿ ಇತ್ತೀಚೆಗೆ ಕೋವಿಡ್ -19 ರೋಗಿಗಳ ಸರಣಿ ಸಾವಿನ ಕುರಿತು ಸಲ್ಲಿಸಲಾಗಿದ್ದ ಹಲವು ಅರ್ಜಿಗಳನ್ನು ಹೈಕೋರ್ಟ್ ವಿಚಾರಣೆ ನಡೆಸಿತ್ತು.

ಈ ಮಧ್ಯೆ, ವೈದ್ಯಕೀಯ ಆಮ್ಲಜನಕದ ನಿಗದಿಪಡಿಸಿದ ಕೋಟಾವನ್ನು ಗೋವಾಕ್ಕೆ ಆದಷ್ಟು ಬೇಗನೆ ಲಭ್ಯವಾಗುವಂತೆ ಕೇಂದ್ರ ಸರ್ಕಾರ ನೋಡಿಕೊಳ್ಳಬೇಕು ಎಂದು ಹೈಕೋರ್ಟ್ ಹೇಳಿದೆ.

ಜಿಎಂಸಿಎಚ್‌ನಲ್ಲಿ ಕೋವಿಡ್ -19 ರೋಗಿಗಳಿಗೆ ವೈದ್ಯಕೀಯ ಆಮ್ಲಜನಕದ ಲಭ್ಯತೆ ಅತ್ಯಂತ ಕಠಿಣವಾಗಿದೆ. ಈ ಬಗ್ಗೆ ಗಮನ ಹರಿಸುವಂತೆ ಬುಧವಾರ ಹೈಕೋರ್ಟ್ ಸೂಚಿಸಿತ್ತು. ಆದರೂ, ಮತ್ತೆ ಅನಾಹುತ ನಡೆದುಹೋಗಿದೆ.

 

 

 

 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು