ಚಿತ್ರಕೂಟ (ಉತ್ತರ ಪ್ರದೇಶ): ಮೂವರಿಂದ ಸಾಮೂಹಿಕ ಅತ್ಯಾಚಾರಕ್ಕೊಳಗಾದ ಹದಿನೈದು ವರ್ಷದ ಬಾಲಕಿಯೊಬ್ಬಳು ನೇಣುಬಿಗಿದುಕೊಂಡು ಮೃತಪಟ್ಟಿರುವ ಘಟನೆ ಉತ್ತರ ಪ್ರದೇಶದ ಚಿತ್ರಕೂಟ ಜಿಲ್ಲೆಯ ಮಾಣಿಕ್ಪುರದಲ್ಲಿ ನಡೆದಿದೆ.

ಚಿತ್ರಕೂಟ ಜಿಲ್ಲೆಯ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಂಕಿತ್ ಮಿತ್ತಲ್ ಮಂಗಳವಾರ ಘಟನೆಯನ್ನು ಖಚಿತಪಡಿಸಿದ್ದಾರೆ.

ಅಕ್ಟೋಬರ್ 8ರಂದು ‘ಅರಣ್ಯ ಪ್ರದೇಶದಲ್ಲಿ ಬಾಲಕಿಯ ಮೇಲೆ ಮೂವರು ಸಾಮೂಹಿಕ ಅತ್ಯಾಚಾರವೆಸಗಿದ್ದರು’ ಎಂದುಬಾಲಕಿಯ ಕುಟುಂಬದ ಸದಸ್ಯರು ಆರೋಪಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

‘ಮಗಳನ್ನು ಅತ್ಯಾಚಾರ ಎಸಗಿದ ಆರೋಪಿಗಳು, ಆಕೆಯ ಕೈಕಾಲುಗಳನ್ನು ಕಟ್ಟಿದ್ದರು. ಪೊಲೀಸರು ಆಕೆಯನ್ನು ಮನೆಗೆ ಕರೆತಂದರು. ಆದರೆ, ಪೊಲೀಸರು ಆರೋಪಿಗಳ ವಿರುದ್ಧ ಎಫ್ಐಆರ್ ದಾಖಲಿಸಲಿಲ್ಲ‘ ಎಂದು ಸಂತ್ರಸ್ತೆಯ ತಂದೆ ಆರೋಪಿಸಿದ್ದಾರೆ.

ಸಂತ್ರಸ್ತೆಯ ಕುಟುಂಬ ಸದಸ್ಯರು ನೀಡಿದ ದೂರಿನ ಅನ್ವಯ ಗ್ರಾಮದ ಮುಖಂಡ ಮಗ ಕಿಶನ್ ಉಪಾಧ್ಯಾಯ, ಆಶೀಶ್ ಮತ್ತು ಸತೀಶ್ ಎಂಬುವರ ವಿರುದ್ಧ ಐಪಿಸಿ ಮತ್ತು ಎಸ್.ಸಿ, ಎಸ್.ಟಿ ದೌರ್ಜನ್ಯ ತಡೆ ಕಾಯ್ದೆ ಮತ್ತು ಪೋಕ್ಸೊ ಕಾಯ್ದೆಯಡಿ ಬಂಧಿಸಿರುವುದಾಗಿ ಮಿತ್ತಲ್ ತಿಳಿಸಿದ್ದಾರೆ.

‘ಅತ್ಯಾಚಾರಕ್ಕೊಳಗಾದ ಬಾಲಕಿ ನೀಡಿದ ದೂರನ್ನು ಸ್ವೀಕರಿಸದ ಕಾರಣ, ಆಕೆ ಪ್ರಾಣ ಕಳೆದುಕೊಂಡಿದ್ದಾಳೆ‘ ಎಂದು ಕುಟುಂಬದ ಸದಸ್ಯರು ಆರೋಪಿಸಿದ್ದಾರೆ. ಇವರ ಆರೋಪವನ್ನು ಪೊಲೀಸರು ನಿರಾಕರಿಸಿದ್ದು, ಬಾಲಕಿ ಯಾವುದೇ ದೂರನ್ನು ನೀಡಿಲ್ಲ ಎಂದಿದ್ದಾರೆ.

‘ಮಣರೋತ್ತರ ಪರೀಕ್ಷೆಯ ವರದಿಯಲ್ಲಿ ಬಾಲಕಿ ಮೇಲೆ ಅತ್ಯಾಚಾರಾಗಿರುವುದು ದೃಢಪಟ್ಟಿಲ್ಲ. ಕೆಲವು ಮಾದರಿಗಳನ್ನು ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ ಪರೀಕ್ಷೆಗಾಗಿ ಕಳುಹಿಸಿದ್ದೇವೆ‘ ಎಂದು ಮಿತ್ತಲ್ ತಿಳಿಸಿದ್ದಾರೆ.

ಗ್ರಾಮದಲ್ಲಿ ಬುಧವಾರ ಬಾಲಕಿಯ ಮೃತದೇಹದ ಅಂತ್ಯಕ್ರಿಯೆ ನಡೆಯಲಿದ್ದು, ಸೂಕ್ತ ಭದ್ರತಾ ವ್ಯವಸ್ಥೆ ಮಾಡಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.