ಮಂಗಳವಾರ, ಮಾರ್ಚ್ 2, 2021
21 °C

ದೇಶದಲ್ಲಿ 150 ಜನರಿಗೆ ರೂಪಾಂತರಿ ಸೋಂಕು

ಪಿಟಿಐ Updated:

ಅಕ್ಷರ ಗಾತ್ರ : | |

ನವದೆಹಲಿ: ಬ್ರಿಟನ್‌ನಲ್ಲಿ ಕಾಣಿಸಿಕೊಂಡ ಕೊರೊನಾ ರೂಪಾಂತರಿತ ಸೋಂಕು ಪೀಡಿತರ ಸಂಖ್ಯೆ ದೇಶದಲ್ಲಿ 150ಕ್ಕೆ ಏರಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಶನಿವಾರ ತಿಳಿಸಿದೆ.

ಸೋಂಕು ಪೀಡಿತರನ್ನು ಆಯಾ ರಾಜ್ಯಗಳಲ್ಲಿ ಅಗತ್ಯ ಸೌಲಭ್ಯವುಳ್ಳ ನಿಯೋಜಿತ ನಿಗಾ ಕೊಠಡಿಯಲ್ಲಿ ಇರಿಸಲಾಗಿದೆ. ಇವರೊಂದಿಗೆ ನಿಕಟ ಸಂಪರ್ಕಕ್ಕೆ ಬಂದಿದ್ದವರನ್ನು ಕ್ವಾರಂಟೈನ್‌ನಲ್ಲಿ ಇಡಲಾಗಿದೆ. ಸಹ ಪ್ರಯಾಣಿಕರಲ್ಲಿ ಇರಬಹುದಾದ ಸೋಂಕು ಪೀಡಿತರನ್ನು ಗುರುತಿಸುವ ಕಾರ್ಯ ನಡೆದಿದೆ ಎಂದು ಸಚಿವಾಲಯ ತಿಳಿಸಿದೆ.

ಪರಿಸ್ಥಿತಿಯನ್ನು ಎಚ್ಚರಿಕೆಯಿಂದ ಗಮನಿಸಲಾಗುತ್ತಿದೆ. ನಿಯಂತ್ರಣ, ಪರೀಕ್ಷೆ ಕುರಿತಂತೆ ರಾಜ್ಯಗಳಿಗೆ ನಿಯಮಿತವಾಗಿ ಅಗತ್ಯ ಸೂಚನೆಗಳನ್ನು ನೀಡಲಾಗುತ್ತಿದೆ. ಇದುವರೆಗೂ ಒಟ್ಟು 150 ಜನರಿಗೆ ಸೋಂಕು ತಗುಲಿದೆ ಎಂದು ಹೇಳಿಕೆ ತಿಳಿಸಿದೆ.

ರೂಪಾಂತರಿ ಸೋಂಕು ಈಗಾಗಲೇ ಆಸ್ಟ್ರೇಲಿಯಾ, ಇಟಲಿ, ಸ್ವೀಡನ್, ಸ್ಪೇನ್, ಜರ್ಮನಿ ಸೇರಿದಂತೆ ಹಲವು ದೇಶಗಳಲ್ಲಿ ಕಾಣಿಸಿಕೊಂಡಿದೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು