ಶನಿವಾರ, ಸೆಪ್ಟೆಂಬರ್ 25, 2021
23 °C

ಕರ್ನಾಟಕದ 6 ಮಂದಿ ಸೇರಿ 152 ಪೊಲೀಸ್‌ ಅಧಿಕಾರಿಗಳಿಗೆ ತನಿಖಾ ಶೇಷ್ಠತೆಯ ಪದಕ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: 2021ನೇ ಸಾಲಿನಲ್ಲಿ ಕರ್ನಾಟಕದ ಆರು ಪೊಲೀಸ್‌ ಅಧಿಕಾರಿಗಳು ಸೇರಿದಂತೆ 152 ಪೊಲೀಸ್‌ ಅಧಿಕಾರಿಗಳಿಗೆ ತನಿಖಾ ಶ್ರೇಷ್ಠತೆಗಾಗಿ ಇರುವ ಕೇಂದ್ರ ಗೃಹ ಸಚಿವರ ಪದಕವನ್ನು ನೀಡಿ ಗೌರವಿಸಲಾಗಿದೆ.

‘ಅಪರಾಧ ತನಿಖೆಯ ಉನ್ನತ ವೃತ್ತಿಪರ ಗುಣಮಟ್ಟಕ್ಕಾಗಿ ದೇಶದಾದ್ಯಂತ 28 ಮಹಿಳಾ ಅಧಿಕಾರಿಗಳು ಸೇರಿದಂತೆ ಒಟ್ಟು 152 ಪೊಲೀಸ್‌ ಅಧಿಕಾರಿಗಳಿಗೆ ಈ ಪದಕವನ್ನು ನೀಡಲಾಗಿದೆ’ ಎಂದು ಕೇಂದ್ರ ಗೃಹ ಸಚಿವಾಲಯವು ಗುರುವಾರ ತಿಳಿಸಿದೆ.

ಅಪರಾಧದ ತನಿಖೆಯ ವೃತ್ತಿಪರ ಗುಣಮಟ್ಟವನ್ನು ಉತ್ತೇಜಿಸಲು ಮತ್ತು ಆ ಶ್ರೇಷ್ಠ ವೃತ್ತಿಪರತೆಯನ್ನು ಹೊಂದಿರುವ ಅಧಿಕಾರಿಗಳನ್ನು ಗುರುತಿಸುವ ನಿಟ್ಟಿನಲ್ಲಿ 2018ರಿಂದ ಈ ಪದಕವನ್ನು ಪ್ರಧಾನ ಮಾಡಲಾಗುತ್ತಿದೆ.

ಸಿಬಿಐನ 15 ಮಂದಿ, ಮಧ್ಯಪ್ರದೇಶ ಮತ್ತು ಮಹಾರಾಷ್ಟ್ರ ಇಲಾಖೆಯ ತಲಾ 11 ಪೊಲೀಸ್‌ ಅಧಿಕಾರಿಗಳು, ಉತ್ತರ ಪ್ರದೇಶದಲ್ಲಿ 10, ಕೇರಳ ಮತ್ತು ರಾಜಸ್ಥಾನ ಪೊಲೀಸ್‌ ಇಲಾಖೆಯ ತಲಾ 9 ಅಧಿಕಾರಿಗಳು, ತಮಿಳುನಾಡಿನ 8 ಮತ್ತು ಬಿಹಾರದ 7 ಅಧಿಕಾರಿಗಳು ಹಾಗೂ ಗುಜರಾತ್‌, ಕರ್ನಾಟಕ ಮತ್ತು ದೆಹಲಿ ಪೊಲೀಸ್‌ ವಿಭಾಗದಲ್ಲಿ ತಲಾ ಆರು ಪೊಲೀಸ್‌ ಅಧಿಕಾರಿಗಳು ಸೇರಿದಂತೆ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶದ ಅಧಿಕಾರಿಗಳಿಗೆ ಈ ಪ್ರಶಸ್ತಿಯನ್ನು ನೀಡಲಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು