ಭೋಪಾಲ್: ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯಲ್ಲಿ 16 ವರ್ಷದ ಬಾಲಕಿಯ ಮೇಲೆ ಮೂವರು ಅಪರಿಚಿತರು ಅತ್ಯಾಚಾರ ಎಸಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಉತ್ತರ ಪ್ರದೇಶದ ಹತ್ರಾಸ್ ಜಿಲ್ಲೆಯಲ್ಲಿ ಸಾಮೂಹಿಕ ಅತ್ಯಾಚಾರಕ್ಕೊಳಗಾಗಿದ್ದ 19 ವರ್ಷದ ದಲಿತ ಮಹಿಳೆ ಮೃತಪಟ್ಟ ಒಂದು ದಿನದ ನಂತರ ಮಧ್ಯಪ್ರದೇಶದ ಮಾರುಗರ್ ಎಂಬ ಗ್ರಾಮದಲ್ಲಿ ಈ ಘಟನೆ ನಡೆದಿದೆ.

ಅಪ್ರಾಪ್ತ ಬಾಲಕಿ ಮತ್ತು ಆಕೆಯ ಸಹೋದರ ಕೃಷಿ ಜಮೀನಿನಲ್ಲಿದ್ದ ಗುಡಿಸಲಿನಲ್ಲಿ ವಾಸಿಸುತ್ತಿದ್ದರು. ಅಲ್ಲಿ ಅವರು ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದರು ಎಂದು ಖಾರ್ಗೋನ್ ಪೊಲೀಸ್ ವರಿಷ್ಠಾಧಿಕಾರಿ ಶೈಲೇಂದ್ರ ಸಿಂಗ್ ಚೌಹಾನ್ ಮಾಹಿತಿ ನೀಡಿದ್ದಾರೆ.

ಸಂತ್ರಸ್ತೆ ವಾಸವಾಗಿದ್ದ ಸ್ಥಳಕ್ಕೆ ಬುಧವಾರ ಮಧ್ಯರಾತ್ರಿ ಮೂವರು ಅಪರಿಚಿತರು ಬಂದಿದ್ದಾರೆ. ಗುಡಿಸಲಿನಲ್ಲಿ ಮಲಗಿದ್ದ ಬಾಲಕಿಯನ್ನು ಬಲವಂತವಾಗಿ ಎಳೆದೊಯ್ಯಲು ಮೂವರು ಪ್ರಯತ್ನಿಸಿದ್ದಾರೆ. ಅದಕ್ಕೆ ಆಕೆಯ ಸಹೋದರ ವಿರೋಧ ವ್ಯಕ್ತಪಡಿಸಿದಾಗ, ಆತನನ್ನು ಕೋಲುಗಳಿಂದ ಹೊಡೆದು ಪ್ರಜ್ಞೆ ತಪ್ಪಿಸಿದ್ದಾರೆ. ಆ ನಂತರ ಬಾಲಕಿಯನ್ನು ಎಳೆದೊಯ್ದು ಅತ್ಯಾಚಾರ ಎಸಗಿ, ರಸ್ತೆಯ ಬದಿಯಲ್ಲಿ ಆಕೆಯನ್ನು ಬಿಟ್ಟು ಓಡಿಹೋಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಬಗ್ಗೆ ಬಾಲಕಿ ಮತ್ತು ಆಕೆಯ ಸಹೋದರ ಪೊಲೀಸರಿಗೆ ದೂರು ನೀಡಿದ್ದು, ಮಧ್ಯಪ್ರದೇಶ ಪೊಲೀಸರು ಆರೋಪಿಗಳಿಗಾಗಿ ತೀವ್ರ ಶೋಧ ನಡೆಸಿದ್ದಾರೆ.

ಇದನ್ನೂ ಓದಿ...

ಹತ್ರಾಸ್ ಅತ್ಯಾಚಾರ: ಉತ್ತರ ಪ್ರದೇಶ ಸರ್ಕಾರ ವಜಾಕ್ಕೆ ಕರ್ನಾಟಕದಲ್ಲಿ ಪ್ರತಿಭಟನೆ

ಉತ್ತರ ಪ್ರದೇಶದಲ್ಲಿ ಮತ್ತೊಂದು ಸಾಮೂಹಿಕ ಅತ್ಯಾಚಾರ, ಯುವತಿ ಸಾವು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.