ಮುಜಾಫರ್‌ನಗರ: 17 ವರ್ಷದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಇಬ್ಬರು ವ್ಯಕ್ತಿಗಳು ಅತ್ಯಾಚಾರವನ್ನು ರೆಕಾರ್ಡ್ ಮಾಡಿ ವಿಡಿಯೊವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.
ಭೋಪಾ ಪೊಲೀಸ್ ಠಾಣೆ ವ್ಯಾಪ್ತಿಯ ಗ್ರಾಮದಲ್ಲಿ ಭಾನುವಾರ ಈ ಘಟನೆ ನಡೆದಿದೆ. ಆರೋಪಿಗಳಾದ ಶುಭಂ ಮತ್ತು ಆಶಿಶ್ ವಿರುದ್ಧ ಪ್ರಕರಣ ದಾಖಲಾಗಿದ್ದು, ಇಬ್ಬರೂ ತಲೆಮರೆಸಿಕೊಂಡಿದ್ದಾರೆ ಎಂದು ಠಾಣಾಧಿಕಾರಿ ಸುಭಾಷ್ ಬಾಬು ತಿಳಿಸಿದ್ದಾರೆ.
ಸಂತ್ರಸ್ತೆಯ ತಾಯಿ ನೀಡಿರುವ ದೂರಿನ ಪ್ರಕಾರ, ಆರೋಪಿಗಳು ಬಾಲಕಿಗೆ ಹಣ್ಣು ನೀಡುವ ಆಮಿಷವೊಡ್ಡಿ ಸೀಬೆ ಮರಗಳಿದ್ದ ತೋಟಕ್ಕೆ ಕರೆದೊಯ್ದು ಸಾಮೂಹಿಕ ಅತ್ಯಾಚಾರ ಮಾಡಿದ್ದಾರೆ. ಅಪರಾಧದ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಪ್ರಸಾರವಾದ ನಂತರ ಘಟನೆ ಬೆಳಕಿಗೆ ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರತ್ಯೇಕ ಘಟನೆಯೊಂದರಲ್ಲಿ, ಕೊತ್ವಾಲಿ ಪೊಲೀಸ್ ಠಾಣೆ ವ್ಯಾಪ್ತಿಯ ಗ್ರಾಮದಲ್ಲಿ ಮಹಿಳೆ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಆರೋಪದ ಮೇಲೆ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.
ಆರೋಪಿ ಬಾಬಿ ಭಾನುವಾರ ತನ್ನ ಹೊಲದಲ್ಲಿದ್ದ ಮಹಿಳೆಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ. ಈ ವೇಳೆ ಆಕೆ ಕೂಗಾಡಿದಾಗ ಆತ ಅಲ್ಲಿಂದ ಕಾಲ್ಕಿತ್ತಿದ್ದಾನೆ ಎಂದು ಅವರು ಹೇಳಿದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.