ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

4 ವರ್ಷದ ಚುನಾವಣೆ: 170 ಕಾಂಗ್ರೆಸ್ ಶಾಸಕರ ನಿಷ್ಠೆ ಬದಲು -ಎಡಿಆರ್ ವರದಿ

Last Updated 11 ಮಾರ್ಚ್ 2021, 12:03 IST
ಅಕ್ಷರ ಗಾತ್ರ

ನವದೆಹಲಿ: 2016 ರಿಂದ 2020ರ ಅವಧಿಯ ಚುನಾವಣೆ ಸಮಯದಲ್ಲಿ ಕಾಂಗ್ರೆಸ್‌ನ 170 ಶಾಸಕರು ಪಕ್ಷ ತೊರೆದು ಬೇರೆ ಪಕ್ಷ ಸೇರಿದ್ದರೆ, ಇದೇ ಅವಧಿಯಲ್ಲಿ ಬಿಜೆಪಿಯಲ್ಲಿ 18 ಶಾಸಕರುಪಕ್ಷವನ್ನು ಬದಲಿಸಿದ್ದಾರೆ ಎಂದು ಮತದಾನ ಹಕ್ಕುಗಳ ಗುಂಪು ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್‌ (ಎಡಿಆರ್‌) ವರದಿ ತಿಳಿಸಿದೆ.

ಈ ಅವಧಿಯಲ್ಲಿ ಪಕ್ಷ ಬದಲಿಸಿದ 405 ಶಾಸಕರಲ್ಲಿ 182 ಮಂದಿ ಬಿಜೆಪಿ ಸೇರಿದರೆ, 38 ಮಂದಿ ಕಾಂಗ್ರೆಸ್‌ಗೆ ಸೇರಿದ್ದಾರೆ. 25 ಮಂದಿ ತೆಲಂಗಾಣ ರಾಷ್ಟ್ರ ಸಮಿತಿ (ಟಿಆರ್‌ಎಸ್) ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ ಎಂದು ವರದಿ ಹೇಳಿದೆ.

ಐದು ಲೋಕಸಭಾ ಕ್ಷೇತ್ರದ ಬಿಜೆಪಿ ಸಂಸದರು 2019ರ ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಪಕ್ಷ ತೊರೆದು ಬೇರೆ ಪಕ್ಷಗಳಿಗೆ ಸೇರಿದರು. 2016–2020ರ ಅವಧಿಯಲ್ಲಿ ರಾಜ್ಯಸಭೆಗೆ ಆಯ್ಕೆಯಾಗಿದ್ದ ಏಳು ಕಾಂಗ್ರೆಸ್ ಸದಸ್ಯರು ಚುನಾವಣೆಯಲ್ಲಿ ಸ್ಪರ್ಧಿಸುವುದಕ್ಕಾಗಿ ಪಕ್ಷ ತೊರೆದು ಮತ್ತೊಂದು ಪಕ್ಷಕ್ಕೆ ಸೇರಿದ್ದಾರೆ ಎಂದು ವರದಿ ತಿಳಿಸಿದೆ.

‘ಹೀಗೆ ಶಾಸಕರ ಪಕ್ಷಾಂತರದಿಂದಾಗಿಯೇ ಕರ್ನಾಟಕ, ಮಧ್ಯಪ್ರದೇಶ, ಮಣಿಪುರ, ಗೋವಾ ಮತ್ತು ಅರುಣಾಚಲ ಪ್ರದೇಶದ ವಿಧಾನಸಭೆಯಲ್ಲಿ ಇತ್ತೀಚೆಗೆ ಸರ್ಕಾರಗಳು ಪತನಗೊಂಡಿವೆ ಎಂಬುದನ್ನು ಗಮನಿಸಬೇಕು‘ ಎಂದು ವರದಿ ತಿಳಿಸಿದೆ.

2016-2020ರ ಅವಧಿಯಲ್ಲಿ ರಾಜಕೀಯ ಪಕ್ಷಗಳನ್ನು ಬದಲಾಯಿಸಿದ 16 ಮಂದಿ ರಾಜ್ಯಸಭಾ ಸದಸ್ಯರಲ್ಲಿ 10 ಮಂದಿ ಬಿಜೆಪಿಗೆ ಸೇರಿದ್ದಾರೆ. ಪಕ್ಷಗಳನ್ನು ಬದಲಿಸಿದ 12 ಲೋಕಸಭಾ ಸದಸ್ಯರಲ್ಲಿ ಐವರು 2019 ರ ಲೋಕಸಭೆ ಚುನಾವಣೆಯ ವೇಳೆ ಕಾಂಗ್ರೆಸ್ ಸೇರಿದ್ದಾರೆ ಎಂದು ವರದಿ ತಿಳಿಸಿದೆ.

ಈ ವರದಿ ತಯಾರಿಕೆಗಾಗಿ ಎಡಿಆರ್‌ ಸಂಸ್ಥೆ, ಚುನಾವಣಾ ಆಯೋಗದಲ್ಲಿನ 433 ಸಂಸದರು ಮತ್ತು ಶಾಸಕರ ಸ್ವಯಂ ದೃಢೀಕರಣದ ಅಫಿಡವಿಟ್‌ಗಳನ್ನು ವಿಶ್ಲೇಷಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT