ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರೈಲ್ವೆ ಇಲಾಖೆಯ ಜಾಗದಲ್ಲಿ 179 ಕಡೆ ದೇಗುಲ, ಮಸೀದಿ, ದರ್ಗಾಗಳ ನಿರ್ಮಾಣ

Last Updated 1 ಆಗಸ್ಟ್ 2021, 14:35 IST
ಅಕ್ಷರ ಗಾತ್ರ

ನವದೆಹಲಿ: ದೇಶದಾದ್ಯಂತ ರೈಲ್ವೆ ಇಲಾಖೆಯ ಆಸ್ತಿಯಲ್ಲಿ ಅಂದರೆ ಪ್ಲಾಟ್‌ಫಾರ್ಮ್‌ಗಳು ಮತ್ತು ಯಾರ್ಡ್‌ಗಳಲ್ಲಿ 179 ಕಡೆ ಅಕ್ರಮವಾಗಿ ಧಾರ್ಮಿಕ ಕಟ್ಟಡಗಳು ತಲೆ ಎತ್ತಿವೆ ಎಂದು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್‌ ತಿಳಿಸಿದ್ದಾರೆ.

ಈ ಕಟ್ಟಡಗಳಲ್ಲಿ ದೇವಸ್ಥಾನ ದರ್ಗಾಗಳು, ಮಸೀದಿಗಳು ಸೇರಿವೆ. ಹಲವು ವರ್ಷಗಳಿಂದ ಇವು ಅಸ್ತಿತ್ವದಲ್ಲಿವೆ ಎಂದು ಸಂಸತ್ತಿನಲ್ಲಿ ನೀಡಿರುವ ಲಿಖಿತ ಉತ್ತರದಲ್ಲಿ ಅವರು ತಿಳಿಸಿದ್ದಾರೆ.

ಅಕ್ರಮ ನಿರ್ಮಾಣದ ಈ ಸಂಕೀರ್ಣಗಳ ತೆರವಿಗೆ ರೈಲ್ವೆ ಆಡಳಿತ ಮುಂದಾಗಿದೆ. ಇದಕ್ಕಾಗಿ ರೈಲ್ವೆ ಸುರಕ್ಷತಾ ದಳ (ಆರ್‌ಪಿಎಫ್‌), ಸ್ಥಳೀಯ ಆಡಳಿತ ಮತ್ತು ಸರ್ಕಾರಗಳ ನೆರವು ಪಡೆಯಲಾಗಿದೆ ಎಂದು ತಿಳಿಸಿದ್ದಾರೆ.

ಈ ಅಕ್ರಮ ನಿರ್ಮಾಣಗಳಿಂದ ಇನ್ನಷ್ಟು ಭೂಮಿ ಅತಿಕ್ರಮಣವಾಗದಂತೆಯೂ ಇಲಾಖೆಯು ಕಟ್ಟೆಚ್ಚರ ವಹಿಸಿದೆ. ಇವುಗಳನ್ನು ತೆರವುಗೊಳಿಸಲು ರೈಲ್ವೆ ಇಲಾಖೆಯು ಮುಂದಾಗಿದ್ದರೂ ಸ್ಥಳೀಯರಿಂದ ವಿರೋಧ ವ್ಯಕ್ತವಾಗುತ್ತಿದೆ. ತೆರವುಗೊಳಿಸಲು ರಾಜ್ಯ ಸರ್ಕಾರಗಳ ನೆರವು ಹಾಗೂ ಸಹಕಾರ ಅಗತ್ಯವಾಗಿದೆ ಎಂದು ತಿಳಿಸಿದ್ದಾರೆ.

ಅಲ್ಲದೆ, ಧಾರ್ಮಿಕ ಕೇಂದ್ರಗಳ ಪ್ರಮುಖರ ಜೊತೆಗೆ ಸೌಹಾರ್ದಯುತವಾಗಿ ಚರ್ಚಿಸಿ ನಿರ್ಮಾಣಗಳನ್ನು ಸ್ಥಳಾಂತರಗೊಳಿಸಲು ಯತ್ನಿಸಲಾಗುತ್ತಿದೆ. ಹಾಗೂ ಹೊಸದಾಗಿ ಇಂತಹ ಯಾವುದೇ ನಿರ್ಮಾಣಗಳು ರೈಲ್ವೆ ಇಲಾಖೆಗೆ ಸೇರಿದ ಭೂಮಿಯಲ್ಲಿ ತಲೆಎತ್ತದಂತೆ ಇಲಾಖೆಯು ಎಚ್ಚರಿಕೆ ವಹಿಸುತ್ತಿದೆ ಎಂದು ಉತ್ತರದಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT