ಉತ್ತರಪ್ರದೇಶ: ದಲಿತ ಯುವತಿಯ ಮೇಲೆ ಒಂದು ವರ್ಷ ಅತ್ಯಾಚಾರ

ಬಲಿಯಾ (ಉತ್ತರಪ್ರದೇಶ): ದಲಿತ ಸಮುದಾಯದ 17 ವರ್ಷದ ಯುವತಿಯ ಮೇಲೆ ಒಂದು ವರ್ಷ ಕಾಲ ಅತ್ಯಾಚಾರವೆಸಗಿದ ಆರೋಪದಡಿ ವ್ಯಕ್ತಿಯೊಬ್ಬನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ಭಾನುವಾರ ತಿಳಿಸಿದರು.
ಈ ಸಂಬಂಧ ಸಂತ್ರಸ್ತೆಯ ತಾಯಿ ಪೊಲೀಸ್ ಠಾಣೆಯಲ್ಲಿ ಶನಿವಾರ ದೂರು ದಾಖಲಿಸಿದ್ದಾರೆ. ಪಕ್ಕದ ಮನೆಯ 20 ವರ್ಷದ ಯುವಕನು, ಮಗಳ ಮೇಲೆ ಒಂದು ವರ್ಷ ಕಾಲ ಅತ್ಯಾಚಾರ ಎಸಗಿದ್ದಾನೆ ಎಂದು ಅವರು ದೂರಿನಲ್ಲಿ ತಿಳಿಸಿದ್ದಾರೆ ಎಂದು ರೇವತಿ ಪೊಲೀಸ್ ಠಾಣೆಯ ಎಸ್ಎಚ್ಒ ರಾಜೀವ್ ಸಿಂಗ್ ಹೇಳಿದರು.
ಯುವಕನ ವಿರುದ್ಧ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ. ಯುವತಿಯನ್ನು ವೈದ್ಯಕೀಯ ಪರೀಕ್ಷೆಗೆ ಕಳುಹಿಸಲಾಗಿದೆ. ಆದಷ್ಟು ಬೇಗ ಆರೋಪಿಯನ್ನು ಬಂಧಿಸುತ್ತೇವೆ ಎಂದು ಅವರು ತಿಳಿಸಿದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.