ತಿರುವನಂತಪುರಂ: ಬ್ರಿಟನ್‌ನಿಂದ ಕೇರಳಕ್ಕೆ ಬಂದ 18 ಮಂದಿಯಲ್ಲಿ ಕೋವಿಡ್–19 ದೃಢಪಟ್ಟಿದೆ ಎಂದು ಕೇರಳದ ಆರೋಗ್ಯ ಸಚಿವೆ ಕೆ.ಕೆ. ಶೈಲಜಾ ಅವರು ಮಂಗಳವಾರ ತಿಳಿಸಿದರು.

‘ಇವರಿಗೆಹೊಸ ಸ್ವರೂಪದ ಕೊರೊನಾ ವೈರಸ್ ತಗುಲಿರುವ ಸಾಧ್ಯತೆಯಿದೆ. ಹಾಗಾಗಿ ಲಂಡನ್‌ನಿಂದ ಮರಳಿ ಬಂದವರಿಗೆ ಮನೆಯಲ್ಲೇ ಪ್ರತ್ಯೇಕ ವಾಸ ಮಾಡಲು ಸೂಚಿಸಲಾಗಿದೆ. ಇದಕ್ಕಾಗಿ ಬೇಕಾದ ಎಲ್ಲಾ ವ್ಯವಸ್ಥೆಗಳನ್ನು ಮಾಡಲಾಗಿದೆ’ ಎಂದು ಅವರು ಮಾಹಿತಿ ನೀಡಿದರು.

‘18 ಮಂದಿಯಲ್ಲಿ ಕೋವಿಡ್ ದೃಢಪಟ್ಟಿರುವುದರಿಂದ ಅವರ ಮಾದರಿಗಳನ್ನು ಪುಣೆಯ ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ವೈರಾಲಜಿಗೆ (ಎನ್‌ಐವಿ) ಕಳುಹಿಸಲಾಗಿದೆ. ಈಗಾಗಲೇ ದೇಶದಲ್ಲಿ ಆರು ಮಂದಿಗೆ ರೂಪಾಂತರಗೊಂಡ ಸೋಂಕು ತಗುಲಿರುವುದು ದೃಢಪಟ್ಟಿದೆ. ವೃದ್ಧರು ಮತ್ತು ಒಂದಕ್ಕಿಂತ ಹೆಚ್ಚು ರೋಗಲಕ್ಷಣಗಳನ್ನು ಹೊಂದಿರುವವರು ಜಾಗರೂಕರಾಗಿರಬೇಕು’ ಎಂದು ಅವರು ಹೇಳಿದರು.

‘ಈಗಾಗಲೇ ಕೇರಳದ ನಾಲ್ಕು ಅಂತರರಾಷ್ಟ್ರೀಯ ವಿಮಾನ ನಿಲ್ದಾಣಗಳಲ್ಲಿ ಕಣ್ಗಾವಲನ್ನು ಹೆಚ್ಚಿಸಲಾಗಿದೆ’ ಎಂದು ಅವರು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.