ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಮ್ಮು ಮತ್ತು ಕಾಶ್ಮೀರ: 2021ರಲ್ಲಿ 100 ಕಾರ್ಯಾಚರಣೆಯಲ್ಲಿ 182 ಉಗ್ರರ ಹತ್ಯೆ

Last Updated 31 ಡಿಸೆಂಬರ್ 2021, 10:04 IST
ಅಕ್ಷರ ಗಾತ್ರ

ಜಮ್ಮು: 2021ರಲ್ಲಿ ಜಮ್ಮು ಮತ್ತು ಕಾಶ್ಮೀರದಲ್ಲಿ ಭದ್ರತಾ ಪಡೆಗಳು ನಡೆಸಿದ 100 ಯಶಸ್ವಿ ಕಾರ್ಯಾಚರಣೆಯಲ್ಲಿ 182 ಉಗ್ರರು ಹತರಾಗಿದ್ದಾರೆ ಎಂದು ಡಿಜಿಪಿ ದಿಲ್‌ಬಾಗ್ ಸಿಂಗ್ ಶುಕ್ರವಾರ ಮಾಹಿತಿ ನೀಡಿದ್ದಾರೆ.

ಪ್ರಸಕ್ತ ಸಾಲಿನಲ್ಲಿ ಕಣಿವೆ ಪ್ರದೇಶದಲ್ಲಿ ಉಗ್ರ ಪಡೆಗೆ 134 ಮಂದಿಯ ನೇಮಕ ನಡೆದಿದೆ. ಅವರಲ್ಲಿ 72 ಮಂದಿಯನ್ನು ಹತ್ಯೆ ಮಾಡಲಾಗಿದ್ದು, 22 ಮಂದಿಯನ್ನು ಬಂಧಿಸಲಾಗಿದೆ ಎಂದು ತಿಳಿಸಿದ್ದಾರೆ.

ಈ ವರ್ಷ ಉಗ್ರರ ಒಳನುಸುಳುವಿಕೆ ಕೂಡ ಕಡಿಮೆಯಾಗಿದೆ. 34 ಉಗ್ರರು ಒಳನುಸುಳಿದ್ದಾರೆ. ಕಳೆದ 24 ಗಂಟೆಗಳಲ್ಲಿ ಪಂಥಾ ಚೌಕ್‌ನಲ್ಲಿ ಪೊಲೀಸ್ ಬಸ್ ಮೇಲೆ ನಡೆದ ದಾಳಿಯಲ್ಲಿ ಭಾಗಿಯಾಗಿದ್ದ ಜೈಶೆ ಮೊಹಮ್ಮದ್‌ ಸಂಘಟನೆಯ ಒಂಬತ್ತು ಉಗ್ರರನ್ನು ಹತ್ಯೆಗೈಯಲಾಗಿದೆ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT