ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

India Covid Updates | 18 ಸಾವಿರಕ್ಕೂ ಹೆಚ್ಚು ಹೊಸ ಪ್ರಕರಣ, 40 ಮಂದಿ ಸಾವು

Last Updated 7 ಆಗಸ್ಟ್ 2022, 4:14 IST
ಅಕ್ಷರ ಗಾತ್ರ

ನವದೆಹಲಿ: ದೇಶದಾದ್ಯಂತ ಕಳೆದ 24 ಗಂಟೆಗಳಲ್ಲಿ 18,738 ಹೊಸ ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು, 40 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.

ಇದರೊಂದಿಗೆ ಸೋಂಕಿತರ ಸಂಖ್ಯೆ 4,41,45,732 ಕ್ಕೆ ಏರಿಕೆಯಾಗಿದೆ. ಆ ಪೈಕಿ 5,26,689 ಮಂದಿ ಸಾವಿಗೀಡಾಗಿದ್ದಾರೆ.

ಇದುವರೆಗೆ 4,34,84,110 ಮಂದಿ ಗುಣಮುಖರಾಗಿದ್ದಾರೆ. ಸದ್ಯ ದೇಶದಲ್ಲಿ 1,34,933 ಸಕ್ರಿಯ ಪ್ರಕರಣಗಳಿವೆ.

ಮಹಾರಾಷ್ಟ್ರದಲ್ಲಿ 11,875, ಪಂಜಾಬ್‌ನಲ್ಲಿ 11,735, ಕರ್ನಾಟಕದಲ್ಲಿ 11,355, ಕೇರಳದಲ್ಲಿ 11,103, ತಮಿಳುನಾಡಿನಲ್ಲಿ 10,261 ಸಕ್ರಿಯ ಪ್ರಕರಣಗಳಿವೆ.

ದೇಶದಾದ್ಯಂತ ಒಟ್ಟು 206.21 ಕೋಟಿ ಡೋಸ್ ಕೋವಿಡ್ ಲಸಿಕೆ ನೀಡಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT