ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೇರಳದಲ್ಲಿ 19 ಓಮೈಕ್ರಾನ್ ಪ್ರಕರಣ ದೃಢ: ಸೋಂಕಿತರ ಸಂಖ್ಯೆ 57ಕ್ಕೆ ಏರಿಕೆ

Last Updated 26 ಡಿಸೆಂಬರ್ 2021, 16:24 IST
ಅಕ್ಷರ ಗಾತ್ರ

ತಿರುವನಂತಪುರ: ಕೇರಳದಲ್ಲಿ ಭಾನುವಾರ ಮತ್ತೆ 19 ಮಂದಿಯಲ್ಲಿ ಓಮೈಕ್ರಾನ್ ಪ್ರಕರಣ ದೃಢಪಟ್ಟಿವೆ. ಇದರೊಂದಿಗೆ ರಾಜ್ಯದಲ್ಲಿ ಕೊರೊನಾ ವೈರಸ್‌ನ ಹೊಸ ರೂಪಾಂತರ ತಳಿಯಿಂದ ಸೋಂಕಿತರಾದವರ ಸಂಖ್ಯೆ 57ಕ್ಕೆ ಏರಿಕೆಯಾಗಿದೆ ಎಂದು ರಾಜ್ಯ ಆರೋಗ್ಯ ಸಚಿವಾಲಯ ತಿಳಿಸಿದೆ.

ಹೊಸ ಪ್ರಕರಣಗಳ ಪೈಕಿ 11 ಎರ್ನಾಕುಳಂ, 6 ತಿರುವನಂತಪುರ, ತ್ರಿಶೂರ್ ಹಾಗೂ ಕಣ್ಣೂರಿನಲ್ಲಿ ತಲಾ 1 ಪ್ರಕರಣ ದಾಖಲಾಗಿದೆ.

ರಾಜ್ಯದಲ್ಲಿ ಓಮೈಕ್ರಾನ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಪ್ರತಿಯೊಬ್ಬರೂ ಸಾಕಷ್ಟು ಮುನ್ನೆಚ್ಚರಿಕೆ ವಹಿಸುವಂತೆ ಆರೋಗ್ಯ ಸಚಿವಾಲಯ ಸೂಚಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT