ಶನಿವಾರ, ಮೇ 15, 2021
24 °C

ದೆಹಲಿ: 24 ಗಂಟೆಗಳಲ್ಲಿ19,486 ಜನರಿಗೆ ಕೊರೊನಾ ಸೋಂಕು,141 ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಕೊರೊನಾ ಸೋಂಕಿತರ ಪ್ರಮಾಣದಲ್ಲಿ ಶುಕ್ರವಾರವೂ ತೀವ್ರ ಹೆಚ್ಚಳ ಕಂಡುಬಂದಿದ್ದು, ಸಂಜೆಯವರೆಗೆ ಒಟ್ಟು 19,486 ಜನರಲ್ಲಿ ಸೋಂಕು ಇರುವುದು ಪತ್ತೆಯಾಗಿದೆ.

ಗುರುವಾರ ಸಂಜೆಯಿಂದ ಶುಕ್ರವಾರ ಸಂಜೆಯವರೆಗಿನ 24 ಗಂಟೆಗಳ ಅವಧಿಯಲ್ಲಿ ಒಟ್ಟು 98,957 ಜನರನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದ್ದು, ಶೇ 19.69ರಷ್ಟು ಜನರಲ್ಲಿ ಸೋಂಕು ಕಂಡುಬಂದಿದೆ.

ಇದೇ ವೇಳೆ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ 141 ಜನ ಚಿಕಿತ್ಸೆಗೆ ಸ್ಪಂದಿಸದೆ ಸಾವಿಗಿಡಾಗಿದ್ದಾರೆ.

12,649 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಮನೆಗಳಿಗೆ ಮಳಿದ್ದಾರೆ.  ಗುರುವಾರ ಕೊರೊನಾ ಪರೀಕ್ಷೆಗೆ ಒಳಪಟ್ಟಿದ್ದ ಶೇ 20.22ರಷ್ಟು ಜನರಲ್ಲಿ ಸೋಂಕು ಪತ್ತೆಯಾಗಿತ್ತು. 112 ಜನ ಸಾವಿಗೀಡಾಗಿದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು