ಶನಿವಾರ, ಏಪ್ರಿಲ್ 17, 2021
23 °C

1993ರ ಮುಂಬೈ ಸರಣಿ ಸ್ಫೋಟ ಪ್ರಕರಣದ ಆರೋಪಿ ಸಾವು

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಮುಂಬೈ: 1993ರ ಮುಂಬೈ ಸರಣಿ ಬಾಂಬ್‌ ಸ್ಫೋಟ ಪ್ರಕರಣದ ಆರೋಪಿ ನೂರ್‌ ಮೊಹಮ್ಮದ್‌ ಖಾನ್‌ ಸೋಮವಾರ ದೀರ್ಘಕಾಲದ ಅನಾರೋಗ್ಯದಿಂದ ಇಲ್ಲಿನ ತಮ್ಮ ನಿವಾಸದಲ್ಲಿ ಮೃತಪಟ್ಟರು ಎಂದು ಪೊಲೀಸರು ತಿಳಿಸಿದ್ದಾರೆ.

ಮುಂಬೈ ಸ್ಫೋಟದ ಸಂಚುಕೋರ ಟೈಗರ್‌ ಮೆಮೊನ್‌ನ ಆಪ್ತನಾಗಿದ್ದ ಖಾನ್‌ ವೃತ್ತಿಯಲ್ಲಿ ಬಿಲ್ಡರ್ ಆಗಿದ್ದ. ತನ್ನ ಗೋದಾಮಿನಲ್ಲಿ 58 ಆರ್‌ಡಿಎಸ್‌ ಸ್ಫೋಟಕಗಳನ್ನು ದಾಸ್ತಾನು ಇಟ್ಟುಕೊಂಡಿದ್ದ ಆರೋಪ ಆತನ ಮೇಲಿತ್ತು. ವಿಚಾರಣೆ ನಡೆಸಿದ ವಿಶೇಷ ‘ಟಾಡಾ‘ ನ್ಯಾಯಾಲಯ, 2006ರ ನವೆಂಬರ್ 24ರಂದು ಆತ ದೋಷಿ ಎಂದು ತೀರ್ಪು ನೀಡಿತ್ತು ಹಾಗೂ ಆತನಿಗೆ 10 ವರ್ಷಗಳ ಜೈಲು ಶಿಕ್ಷೆ ವಿಧಿಸಿತ್ತು.

1993ರ ಮಾರ್ಚ್‌ 12ರಂದು ಮುಂಬೈ ನಗರದ 12 ಕಡೆಗಳಲ್ಲಿ ಸಂಭವಿಸಿದ ಸರಣಿ ಸ್ಫೋಟಗಳಲ್ಲಿ ಕನಿಷ್ಠ 257 ಮಂದಿ ಮೃತಪಟ್ಟಿದ್ದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು