ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉಪ್ಹಾರ್‌ ಚಿತ್ರಮಂದಿರ ಅಗ್ನಿ ದುರಂತ ಪೊಲೀಸರಿಂದ ಪ್ರತಿಕ್ರಿಯೆ ಕೇಳಿದ ಕೋರ್ಟ್‌

Last Updated 1 ನವೆಂಬರ್ 2022, 12:49 IST
ಅಕ್ಷರ ಗಾತ್ರ

ನವದೆಹಲಿ (ಪಿಟಿಐ): 1997ರಲ್ಲಿ ಉಪ್ಹಾರ್‌ ಚಿತ್ರಮಂದಿರದಲ್ಲಿ ನಡೆದ ಅಗ್ನಿ ಅವಘಡ ಪ್ರಕರಣದ ದೋಷಿ ಗೋಪಾಲ್‌ ಅನ್ಸಾಲ್‌ ಅವರು ಸಲ್ಲಿಸಿರುವ ಅರ್ಜಿ ಸಂಬಂಧ ದೆಹಲಿ ಹೈಕೋರ್ಟ್‌ ಮಂಗಳವಾರ ದೆಹಲಿ ಪೊಲೀಸರಿಂದ ಪ್ರತಿಕ್ರಿಯೆ ಕೇಳಿದೆ.

ಉಪ್ಹಾರ್‌ ಚಿತ್ರಮಂದಿರದ ಅಗ್ನಿ ದುರಂತ ಪ್ರಕರಣದಲ್ಲಿ ಸಾಕ್ಷ್ಯಾಧಾರಗಳನ್ನು ತಿದ್ದಿದ ಆರೋಪದಲ್ಲಿ ರಿಯಲ್‌ ಎಸ್ಟೇಟ್‌ ಉದ್ಯಮಿ ಗೋಪಾಲ್‌ ಅನ್ಸಾಲ್‌ ಅವರನ್ನು ದೋಷಿಯೆಂದು ದೆಹಲಿ ನ್ಯಾಯಾಲಯವು ತೀರ್ಪು ನೀಡಿತ್ತು. ತಮಗೆ ನೀಡಲಾದ ಶಿಕ್ಷೆಯನ್ನು ವಜಾಗೊಳಿಸುವಂತೆ ಕೋರಿ ಅನ್ಸಾಲ್‌ ಅವರು ಸಲ್ಲಿಸಿರುವ ಅರ್ಜಿಯ ಬಗ್ಗೆ ನ್ಯಾಯಾಲಯವು ದೆಹಲಿ ಪೊಲೀಸರಿಂದ ಪ್ರತಿಕ್ರಿಯೆ ಕೇಳಿದೆ.ಪ್ರಕರಣದ ವಿಚಾರಣೆಯನ್ನು ನ್ಯಾಯಾಲಯವು ಡಿಸೆಂಬರ್‌ 13ಕ್ಕೆ ಮುಂದೂಡಿದೆ.

1997ರ ಜೂನ್‌ 13ರಂದು ಈ ಚಿತ್ರಮಂದಿರದಲ್ಲಿ ದೊಡ್ಡ ಪ್ರಮಾಣದಲ್ಲಿ ಬೆಂಕಿ ಅನಾಹುತ ಸಂಭವಿಸಿತ್ತು. ಆ ದುರಂತದಲ್ಲಿ 59 ಮಂದಿ ಸಾವಿಗೀಡಾಗಿದ್ದರು.ಪ್ರಕರಣದಲ್ಲಿ ಗೋಪಾಲ್‌ ಅನ್ಸಾಲ್‌ ಅವರು ಈಗಾಗಲೇ ತಮಗೆ ವಿಧಿಸಲಾಗಿದ್ದ ಸೆರೆವಾಸ ಶಿಕ್ಷೆ ಅವಧಿಯನ್ನು ಪೂರ್ಣಗೊಳಿಸಿದ್ದಾರೆ.

ಈ ಮಧ್ಯೆ ಪ್ರಕರಣದಲ್ಲಿ ತಮಗೆ ನೀಡಲಾಗಿರುವ ಶಿಕ್ಷೆಯನ್ನು ವಜಾಗೊಳಿಸುವಂತೆ ಕೋರಿ ಸುಶೀಲ್ ಅನ್ಸಾಲ್‌ ಮತ್ತು ಅವರ ಮಾಜಿ ಉದ್ಯೋಗಿ ಪಿ.ಪಿ.ಬಾತ್ರಾ ಅವರೂ ಕೋರ್ಟ್ ಮೊರೆ ಹೋಗಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT