ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಲ್‌ಒಸಿಯಲ್ಲಿ ಗಸ್ತು ತಿರುಗುತ್ತಿದ್ದಾಗ ಸ್ಫೋಟ; ಇಬ್ಬರು ಸೈನಿಕರು ಸಾವು

Last Updated 30 ಅಕ್ಟೋಬರ್ 2021, 16:43 IST
ಅಕ್ಷರ ಗಾತ್ರ

ಜಮ್ಮು: ಜಮ್ಮು ಮತ್ತು ಕಾಶ್ಮೀರದ ರಾಜೌರಿ ಜಿಲ್ಲೆಯ ಗಡಿ ನಿಯಂತ್ರಣ ರೇಖೆ (ಎಲ್‌ಒಸಿ) ಬಳಿ ಶನಿವಾರ ನಡೆದ ನಿಗೂಢ ಸ್ಫೋಟವೊಂದರಲ್ಲಿ ಸೇನಾ ಅಧಿಕಾರಿ ಮತ್ತು ಯೋಧ ಹುತಾತ್ಮರಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ನೌಶೇರಾ ಸೆಕ್ಟರ್‌ನ ಕಲಾಲ್ ಪ್ರದೇಶದಲ್ಲಿ ಭಯೋತ್ಪಾದಕರ ಒಳನುಸುಳುವಿಕೆಯನ್ನು ಶೋಧ ಕಾರ್ಯಾಚರಣೆ ವೇಳೆ ಸೇನಾಪಡೆಯು ಗಸ್ತು ಕರ್ತವ್ಯದಲ್ಲಿದ್ದಾಗ ಸ್ಫೋಟ ಸಂಭವಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸ್ಫೋಟದಲ್ಲಿ ಲೆಫ್ಟಿನೆಂಟ್ ಸೇರಿದಂತೆ ಇಬ್ಬರು ಸೇನಾ ಸಿಬ್ಬಂದಿ ತೀವ್ರವಾಗಿ ಗಾಯಗೊಂಡಿದ್ದರು. ತಕ್ಷಣ ಅವರನ್ನು ಹತ್ತಿರದ ಮಿಲಿಟರಿ ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು. ಆದರೆ ನಂತರ ಅವರು ಮೃತಪಟ್ಟರು ಎಂದು ಅವರು ಹೇಳಿದರು.

ಸ್ಫೋಟ ಸಂಭವಿಸಿದ ಪ್ರದೇಶವು ಒಳನುಸುಳುವಿಕೆ ನಿಗ್ರಹ ವ್ಯವಸ್ಥೆಯ ಭಾಗವಾಗಿ ಸೇನೆಯು ಹುದುಗಿಸಿಟ್ಟಿದ್ದ ನೆಲಬಾಂಬ್‌ಗಳಿಂದ ಕೂಡಿತ್ತು. ಸ್ಫೋಟದ ಸ್ವರೂಪವು ತಕ್ಷಣವೇ ತಿಳಿದು ಬಂದಿಲ್ಲ, ಗಸ್ತು ತಂಡವನ್ನು ಗುರಿಯಾಗಿಸಲು ಭಯೋತ್ಪಾದಕರು ಸುಧಾರಿತ ಸ್ಫೋಟಕ ಸಾಧನವನ್ನು (ಐಇಡಿ) ಬಳಸಿರುವ ಸಾಧ್ಯತೆಯನ್ನು ತಳ್ಳಿಹಾಕುವಂತಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸ್ಫೋಟ ಸಂಭವಿಸಿರುವುದನ್ನು ರಕ್ಷಣಾ ವಕ್ತಾರರು ದೃಢಪಡಿಸಿದ್ದು, ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ ಎಂದು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT