ಶುಕ್ರವಾರ, ಡಿಸೆಂಬರ್ 3, 2021
20 °C

ಕೋಲ್ಕತ್ತ: ಶಾಸ್ತ್ರೀಯ ಸಂಗೀತಗಾರ ರಾಶಿದ್‌ ಖಾನ್‌ಗೆ ಕೊಲೆ ಬೆದರಿಕೆ, ಇಬ್ಬರ ಬಂಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕೋಲ್ಕತ್ತ: ಶಾಸ್ತ್ರೀಯ ಸಂಗೀತಗಾರ ಉಸ್ತಾದ್‌ ರಾಶಿದ್‌ ಖಾನ್‌ ಅವರಿಗೆ ಕೊಲೆ ಬೆದರಿಕೆ ಹಾಕಿದ ಆರೋಪದ ಮೇಲೆ ಇಬ್ಬರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಶನಿವಾರ ಹೇಳಿದ್ದಾರೆ. 

ಇಬ್ಬರೂ ಖಾನ್‌ ಅವರ ಮಾಜಿ ಉದ್ಯೋಗಿಗಳಾಗಿದ್ದು, ಹಣಕ್ಕಾಗಿ ಬೇಡಿಕೆ ಇಟ್ಟಿದ್ದರು ಎಂದು ಅವರು ಹೇಳಿದರು. 

ಮೊದಲನೇ ಆರೋಪಿಯಾದ, ಖಾನ್‌ ಅವರ ಕಚೇರಿಯ ಮಾಜಿ ಸಹಾಯಕನನ್ನು ಉತ್ತರ ಪ್ರದೇಶದಲ್ಲಿ ಬಂಧಿಸಲಾಗಿದೆ. ಖಾನ್ ಅವರ ಮಾಜಿ ಚಾಲಕನಾಗಿದ್ದ ಮತ್ತೊಬ್ಬ ಆರೋಪಿಯನ್ನು ಕೋಲ್ಕತ್ತದಲ್ಲಿ ಬಂಧಿಸಲಾಗಿದೆ ಎಂದು ಹಿರಿಯ ಪೊಲೀಸ್‌ ಅಧಿಕಾರಿಯೊಬ್ಬರು ತಿಳಿಸಿದರು. 

‘ಆರೋಪಿಗಳು ಮೊದಲಿಗೆ ₹50 ಲಕ್ಷಕ್ಕೆ ಬೇಡಿಕೆ ಇಟ್ಟಿದ್ದರು. ನಂತರ ಮೊತ್ತದಲ್ಲಿ ಕಡಿತ ಮಾಡಿ ₹20 ಲಕ್ಷ ಕೇಳಿದ್ದಾರೆ. ಹಣ ಕೊಡದಿದ್ದರೆ ಖಾನ್‌ ಅವರನ್ನು ಕೊಲ್ಲುವುದಾಗಿ ಬೆದರಿಕೆ ಹಾಕಿದ್ದರು’ ಎಂದು ಅವರು ಹೇಳಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು