ಶನಿವಾರ, ಮೇ 8, 2021
24 °C

ಮಹಾರಾಷ್ಟ್ರ ಕಟ್ಟಡ ಕುಸಿತ ಪ್ರಕರಣ: ಇಬ್ಬರು ಸಾವು, ಹಲವು ಮಂದಿ ಸಿಲುಕಿರುವ ಶಂಕೆ

ಏಜೆನ್ಸೀಸ್ Updated:

ಅಕ್ಷರ ಗಾತ್ರ : | |

ಮುಂಬೈ: ಮಹಾರಾಷ್ಟ್ರದ ರಾಯಗಢ ಜಿಲ್ಲೆಯ ಮಹಾದ್ ನಗರದಲ್ಲಿ ಸಂಭವಿಸಿರುವ ಕಟ್ಟಡ ಕುಸಿತ ದುರಂತದಲ್ಲಿ ಇಬ್ಬರು ಮೃತಪಟ್ಟಿದ್ದಾರೆ. ಅವಶೇಷಗಳಡಿ ಸಿಲುಕಿರುವವರ ರಕ್ಷಣೆಗಾಗಿ ಕಾರ್ಯಾಚರಣೆ ಮುಂದುವರಿಸಲಾಗಿದೆ. 

ಕಟ್ಟಡದ ಅವಶೇಷಗಳ ಅಡಿಯಲ್ಲಿ ಹಲವು ಮಂದಿ ಸಿಲುಕಿರುವ ಶಂಕೆ ವ್ಯಕ್ತವಾಗಿದ್ದು, ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್‌ಡಿಆರ್‌ಎಫ್‌) ಶೋಧ ಕಾರ್ಯಾಚರಣೆ ನಡೆಸುತ್ತಿದೆ. 

‘ಘಟನಾ ಸ್ಥಳದಲ್ಲಿ ಮೂರು ಎನ್‌ಡಿಆರ್‌ಎಫ್‌ ತಂಡಗಳು ಕಾರ್ಯಾಚರಣೆ ನಡೆಸುತ್ತಿವೆ. ಅವಘಡದಲ್ಲಿ ಗಂಭೀರವಾಗಿ ಗಾಯಗೊಂಡವರನ್ನು ಮುಂಬೈಗೆ ರವಾನಿಸಲಾಗಿದೆ. ವಿಶೇಷ ತಂಡ ತನಿಖೆ ಆರಂಭಿಸಿದೆ’ ಎಂದು ಸಚಿವೆ ಅದಿತಿ ತತ್ಕರೆ ತಿಳಿಸಿದ್ದಾರೆ.

** 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು