ಭಾನುವಾರ, ಸೆಪ್ಟೆಂಬರ್ 26, 2021
25 °C

ದೆಹಲಿ: ಹುಟ್ಟುಹಬ್ಬ ಆಚರಣೆ ವೇಳೆ ಗಾಳಿಯಲ್ಲಿ ಗುಂಡು, ಇಬ್ಬರ ಬಂಧನ

ಪಿಟಿಐ Updated:

ಅಕ್ಷರ ಗಾತ್ರ : | |

ನವದೆಹಲಿ: ಹುಟ್ಟುಹಬ್ಬ ಆಚರಣೆ ವೇಳೆ ಗಾಳಿಯಲ್ಲಿ ರಿವಾಲ್ವರ್‌ನಿಂದ ಗುಂಡು ಹಾರಿಸಿದ್ದ ಆರೋಪಿ ಹಾಗೂ ಆತನ ಸ್ನೇಹಿತನನ್ನು ಬಂಧಿಸಿರುವುದಾಗಿ ಭಾನುವಾರ ದೆಹಲಿ ಪೊಲೀಸರು ತಿಳಿಸಿದ್ದಾರೆ.

ಮನೆಯ ಮೇಲ್ಛಾವಣಿಯ ಮೇಲೆ ಅಭಿಜಿತ್‌ ಅದಾನ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದ. ಇದೇ ಸಂದರ್ಭದಲ್ಲಿ ಆತನ ಸ್ನೇಹಿತ ಸುಮಿತ್ ತನ್ವರ್ ರಿವಾಲ್ವರ್‌ನಿಂದ ಗಾಳಿಯಲ್ಲಿ ಹಲವು ಸುತ್ತು ಗುಂಡು ಹಾರಿಸಿದ್ದ. ಹುಟ್ಟುಹಬ್ಬ ಆಚರಣೆ ಬಳಿಕ ಅಭಿಜಿತ್‌ ಹಾಗೂ ತನ್ವರ್ ವಿಡಿಯೊವನ್ನು ಶನಿವಾರ ಮಧ್ಯರಾತ್ರಿ ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದರು.

ಈ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿತ್ತು. ವಿಡಿಯೊ ಆಧರಿಸಿ ಆರೋಪಿಗಳನ್ನು ಬಂಧಿಸಲಾಗಿದೆ. ಆರೋಪಿಗಳ ವಿರುದ್ಧ ಐಪಿಸಿ ಸೆಕ್ಷನ್‌ 336 (ಸಾರ್ವಜನಿಕರ ಜೀವಕ್ಕೆ ಕುತ್ತು) ಅಡಿ ದೂರು ದಾಖಲಿಸಿಕೊಂಡು ವಿಚಾರಣೆ ನಡೆಸಲಾಗುತ್ತಿದೆ ಎಂದು ಉಪ ಪೊಲೀಸ್‌ ಆಯುಕ್ತ ಪರ್ವಿಂದರ್ ಸಿಂಗ್ ತಿಳಿಸಿದ್ದಾರೆ.

ತನ್ವರ್, ರಿವಾಲ್ವರ್‌ನಿಂದ ಗಾಳಿಯಲ್ಲಿ ಹಲವು ಸುತ್ತು ಗುಂಡು ಹಾರಿಸುತ್ತಿರುವುದು ಕಂಡುಬಂದಿದೆ. ರಿವಾಲ್ವರ್ ತನ್ವಾರ್ ಸ್ನೇಹಿತ ಅಭಿಜಿತ್‌ಗೆ ಸೇರಿದ್ದಾಗಿದೆ. ಸದ್ಯ ಇಬ್ಬರನ್ನು ವಿಚಾರಣೆಗೆ ಒಳಪಡಿಸಲಾಗಿದೆ ಎಂದು ಸಿಂಗ್ ಹೇಳಿದ್ದಾರೆ.

ಇದನ್ನೂ ಓದಿ... ‘ಎ’ ಗ್ರೇಡ್‌ನಿಂದ ‘ಬಿ’ ಗ್ರೇಡ್‌ಗೆ ಹಿಂಬಡ್ತಿ ನೀಡಿದಂತಾಗಿದೆ: ಎಂಟಿಬಿ ನಾಗರಾಜ್‌

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು