ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದ್ವೇಷ ಭಾಷಣ: ಪ್ರತಿವಾದಿಯಾಗಿಸಲು ‘ಸುಪ್ರೀಂ‘ಗೆ ಎರಡು ಹಿಂದೂ ಸಂಘಟನೆಗಳ ಅರ್ಜಿ

Last Updated 24 ಜನವರಿ 2022, 12:23 IST
ಅಕ್ಷರ ಗಾತ್ರ

ನವದೆಹಲಿ (ಪಿಟಿಐ): ಹರಿದ್ವಾರ ಮತ್ತು ದೆಹಲಿಯಲ್ಲಿ ಮುಸಲ್ಮಾನರ ವಿರುದ್ಧ ದ್ವೇಷ ಭಾಷಣ ಮಾಡಿದ್ದು, ತನಿಖೆ ನಡೆಸಲು ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿರುವ ಪ್ರಕರಣದಲ್ಲಿ ತಮ್ಮನ್ನೂ ಪ್ರತಿವಾದಿಗಳನ್ನಾಗಿ ಪರಿಗಣಿಸಬೇಕು ಎಂದು ಮನವಿ ಮಾಡಿ ಎರಡು ಹಿಂದೂ ಸಂಘಟನೆಗಳು ಅರ್ಜಿ ಸಲ್ಲಿಸಿವೆ.

ಹಿಂದೂ ಸೇನಾ ಮತ್ತು ಹಿಂದೂ ಫ್ರಂಟ್‌ ಫಾರ್ ಜಸ್ಟೀಸ್‌ ಸಂಘಟನೆಗಳು ಈ ಅರ್ಜಿ ಸಲ್ಲಿಸಿವೆ. ಈ ಪ್ರಕರಣದ ಸಂಬಂಧ ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಎನ್‌.ವಿ.ರಮಣ ನೇತೃತ್ವದ ಪೀಠವು ಈಗಾಗಲೇ ಕೇಂದ್ರ ಸರ್ಕಾರ, ಉತ್ತರಾಖಂಡ ಸರ್ಕಾರ ಮತ್ತು ದೆಹಲಿ ಪೊಲೀಸ್‌ ಇಲಾಖೆಗೆ ನೋಟಿಸ್‌ ಜಾರಿ ಮಾಡಿದೆ.

ದ್ವೇಷ ಭಾಷಣ ಪ್ರಕರಣಕ್ಕೆ ಸಂಬಂಧಿಸಿದ ತನಿಖೆಗೆ ನಿರ್ದೇಶಿಸಬೇಕು ಮತ್ತು ತಪ್ಪಿತಸ್ಥರ ವಿರುದ್ಧ ಕ್ರಮಜರುಗಿಸಬೇಕು ಎಂದು ಕೋರಿ ಪತ್ರಕರ್ತ ಖುರ್ಬಾನ್‌ ಅಲಿ, ಪಟ್ನಾ ಹೈಕೋರ್ಟ್‌ನ ಮಾಜಿ ನ್ಯಾಯಮೂರ್ತಿ ಮತ್ತು ಹಿರಿಯ ವಕೀಲರಾದ ಅಂಜನಾ ಪ್ರಕಾಶ್‌ ಅವರು ಅರ್ಜಿಸಲ್ಲಿಸಿದ್ದರು.

ಹಿಂದೂಸೇನಾ ಸಂಸ್ಥೆಯ ಅಧ್ಯಕ್ಷ ವಿಷ್ಣುಗುಪ್ತಾ ಅವರು ವಕೀಲ ಬರುನ್‌ ಕುಮಾರ್‌ ಸಿನ್ಹಾ ಮೂಲಕ ಅರ್ಜಿ ಸಲ್ಲಿಸಿದ್ದು, ಹಿಂದೂ ಸಮುದಾಯದ ವಿರುದ್ಧದ ದ್ವೇಷ ಭಾಷಣಕ್ಕಾಗಿ ಎಐಎಂಎಐಎಂ ನಾಯಕ ಅಸಾದುದ್ದೀನ್‌ ಓವೈಸಿ, ತೌಕೀರ್‌ ರಾಜಾ, ಸಾಜಿದ್‌ ರಶೀದಿ ಸೇರಿ ಐವರ ವಿರುದ್ಧ ಎಫ್‌ಐಆರ್‌ ದಾಖಲಿಸಲು ಕೋರಿದ್ದಾರೆ.

ಹಿಂದೂ ಫ್ರಂಟ್ ಫಾರ್ ಜಸ್ಟೀಸ್ ಸಂಘಟನೆಯು ವಕೀಲ ವಿಷ್ಣು ಶಂಕರ್ ಜೈನ್‌ ಅವರ ಮೂಲಕ ಅರ್ಜಿಯನ್ನು ಸಲ್ಲಿಸಿದ್ದು, ವಿವಿಧ ಮುಸಲ್ಮಾನ ನಾಯಕರು ದ್ವೇಷ ಭಾಷಣ ಮಾಡಿದ್ದಾರೆ ಎಂದು ಆರೋಪಿಸಿದೆ. ಆರೋಪಕ್ಕೆ ಪೂರಕವಾಗಿ ಇಂಟರ್‌ನೆಟ್‌ನ ವಿವಿಧ ಲಿಂಕ್‌ಗಳನ್ನು ಒದಗಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT