ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್‌ನಲ್ಲಿ ಉಗ್ರರು ನಡೆಸಿದ ಗ್ರೆನೇಡ್ ದಾಳಿಗೆ ಉತ್ತರ ಪ್ರದೇಶ ಮೂಲದ ಇಬ್ಬರು ಕಾರ್ಮಿಕರು ಬಲಿಯಾಗಿದ್ದಾರೆ.
ಉಗ್ರರನ್ನು ಬಂಧಿಸಲಾಗಿದೆ. ಹತ್ಯೆಯಾದವರು ಉತ್ತರ ಪ್ರದೇಶದ ಕನೂಜ್‌ನ ಕಾರ್ಮಿಕರು. ಜಿಲ್ಲೆಯ ಹರ್ಮನ್ ಪ್ರದೇಶದಲ್ಲಿ ಈ ದಾಳಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಕಾಶ್ಮೀರಿ ಪಂಡಿತರನ್ನು ಗುಂಡಿಕ್ಕಿ ಹತ್ಯೆಗೈದು ಒಂದು ದಿನದಲ್ಲೇ ಈ ದಾಳಿ ನಡೆದಿದೆ. ಮೊನೀಶ್ ಕುಮಾರ್ ಮತ್ತು ರಾಮ್ ಸಾಗರ್ ಮೃತ ದುರ್ದೈವಿಗಳು. ಹ್ಯಾಂಡ್‌ಮೇಡ್ ಗ್ರೆನೇಡ್ ದಾಳಿಯಿಂದ ಇಬ್ಬರು ಗಾಯಗೊಂಡಿದ್ದರು. ಆಸ್ಪತ್ರೆಗೆ ಸಾಗಿಸುವಾಗ ಮೃತಪಟ್ಟಿದ್ದಾರೆ ಎಂದು ಕಾಶ್ಮೀರ ವಲಯದ ಪೊಲೀಸರು ಟ್ವೀಟ್‌ನಲ್ಲಿ ತಿಳಿಸಿದ್ದಾರೆ.
ಅ.15ರಂದು ಕಾಶ್ಮೀರಿ ಪಂಡಿತ್ ಕೃಷ್ಣನ್ ಭಟ್ ಅವರನ್ನು ಗುಂಡಿಕ್ಕಿ ಹತ್ಯೆಗೈಯ್ಯಲಾಗಿತ್ತು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.