ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಮ್ಮು ಮತ್ತು ಕಾಶ್ಮೀರ: ಇಬ್ಬರು ಲಷ್ಕರ್ ಉಗ್ರರನ್ನು ಹೊಡೆದುರುಳಿಸಿದ ಸೇನೆ

Last Updated 4 ಜನವರಿ 2022, 10:08 IST
ಅಕ್ಷರ ಗಾತ್ರ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕುಲ್ಗಾಂ ಜಿಲ್ಲೆಯಲ್ಲಿ ರಕ್ಷಣಾ ಪಡೆಗಳು ನಡೆಸಿದ ಎನ್‌ಕೌಂಟರ್‌ ವೇಳೆ ಲಷ್ಕರ್‌–ಎ–ತೈಯಬಾ (ಎಲ್‌ಇಟಿ) ಸಂಘಟನೆಗೆ ಸೇರಿದ ಇಬ್ಬರು ಉಗ್ರರು ಹತ್ಯೆಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ರಕ್ಷಣಾ ಸಿಬ್ಬಂದಿ ಕುಲ್ಗಾಂ ಜಿಲ್ಲೆಯ ಓಕೇ ಹಳ್ಳಿಯಲ್ಲಿ ಉಗ್ರರ ಶೋಧ ಕಾರ್ಯಾಚರಣೆ ನಡೆಸುತ್ತಿದ್ದರು. ಬಳಿಕ ಉಗ್ರರು ದಾಳಿ ನಡೆಸಿದ್ದರಿಂದ, ಎನ್‌ಕೌಂಟರ್‌ ನಡೆಸಲಾಯಿತು. ಈ ವೇಳೆ ಇಬ್ಬರು ಉಗ್ರರು ಹತ್ಯೆಯಾಗಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.

ಮೃತ ಉ‌ಗ್ರರು ಸ್ಥಳೀಯರೇ ಆಗಿ‌ದ್ದು, ಎಲ್‌ಇಟಿ ಸೇರಿಕೊಂಡಿದ್ದರು. ಹಲವು ಉಗ್ರ ಕೃತ್ಯಗಳಲ್ಲಿಯೂ ಭಾಗಿಯಾಗಿದ್ದರು ಎಂದು ಕಾಶ್ಮೀರ ಪೊಲೀಸ್ ಮಹಾ ನಿರ್ದೇಶಕ ವಿಜಯ್‌ ಕುಮಾರ್‌ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT