ಬುಧವಾರ, 7 ಜೂನ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಂಡಿಪೋರಾದಲ್ಲಿ ಇಬ್ಬರು ಲಷ್ಕರ್ ಎ ತೈಯಬಾ ಸಹಚರರ ಬಂಧನ

Last Updated 25 ಮಾರ್ಚ್ 2023, 13:55 IST
ಅಕ್ಷರ ಗಾತ್ರ

ಶ್ರೀನಗರ: ಭಯೋತ್ಪಾದಕ ಸಂಘಟನೆ ಲಷ್ಕರ್ ಎ ತೈಯಬಾ ಜೊತೆ ನಂಟು ಹೊಂದಿದ್ದ ಆರೋಪದ ಮೇಲೆ ಜಮ್ಮು ಮತ್ತು ಕಾಶ್ಮೀರದ ಬಂಡಿಪೋರಾ ಜಿಲ್ಲೆಯಲ್ಲಿ ಇಬ್ಬರು ಶಂಕಿತರನ್ನು ಬಂಧಿಸಲಾಗಿದೆ.

ಬಂಧಿತರಿಂದ ಎರಡು ಚೀನಾ ಗ್ರೆನೇಡ್ ಮತ್ತು ಇತರ ಕಾನೂನುಬಾಹಿರ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ.

ಬಂಧಿತರನ್ನು ಅಬ್ರಾರ್ ಅಹ್ಮದ್ ವಾನಿ ಅಲಿಯಾಸ್ ಅಬು ಖಾದಿರ್, ಡ್ಯಾನಿಶ್ ಪರ್ವೇಜ್ ಎಂದು ಗುರುತಿಸಲಾಗಿದೆ. ಇಬ್ಬರೂ ಉತ್ತರ ಕಾಶ್ಮೀರ ಜಿಲ್ಲೆಯ ಸುಮ್ಲರ್ ಪ್ರದೇಶದ ನಿವಾಸಿಗಳು ಎಂದು ಪೊಲೀಸ್ ವಕ್ತಾರರು ಹೇಳಿದ್ದಾರೆ.

ಭಯೋತ್ಪಾದಕರ ಸಹಚರರ ಚಲನವಲನದ ಬಗ್ಗೆ ಖಚಿತ ಮಾಹಿತಿಯನ್ನು ಆಧರಿಸಿ ಬಂಡಿಪೋರಾದ ಸುಮ್ಲರ್‌ನಲ್ಲಿ ಚೆಕ್ ಪಾಯಿಂಟ್ ಅನ್ನು ನಿರ್ಮಿಸಲಾಗಿತ್ತು. ಆ ಸ್ಥಳದಲ್ಲಿ ಇಬ್ಬರು ಶಂಕಿತರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT