ಮಂಗಳವಾರ, ಮಾರ್ಚ್ 21, 2023
30 °C

ಶ್ರೀನಗರದಲ್ಲಿ ಎನ್‌ಕೌಂಟರ್‌: ಇಬ್ಬರು ಉಗ್ರರ ಹತ್ಯೆ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಶ್ರೀನಗರ: ನಗರದ ವಸತಿ ಪ್ರದೇಶಗಳಲ್ಲಿ ಭದ್ರತಾ ಪಡೆಗಳು ಶುಕ್ರವಾರ ಬೆಳಿಗ್ಗೆ ಎನ್‌ಕೌಂಟರ್‌ ನಡೆಸಿ, ಇಬ್ಬರು ಅಪರಿಚಿತ ಉಗ್ರರನ್ನು ಹತ್ಯೆ ಮಾಡಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಉಗ್ರರು ಅಡಗಿಕೊಂಡಿರುವ ಖಚಿತ ಮಾಹಿತಿ ಮೇರೆಗೆ ಭದ್ರತಾ ಪಡೆಗಳು ನಗರದ ಸಫಕದಲ್‌–ಸೌದಾ ರಸ್ತೆಯಲ್ಲಿರುವ ದಾನ್ಮಾರ್ ಪ್ರದೇಶದಲ್ಲಿ ಕಾರ್ಯಾಚರಣೆ ಆರಂಭಿಸಿದವು. ಈ ವೇಳೆ ಉಗ್ರರು ಭದ್ರತಾ ಸಿಬ್ಬಂದಿ ಮೇಲೆ ಗುಂಡು ಹಾರಿಸಿದರು. ಇದಕ್ಕೆ ಪ್ರತಿಯಾಗಿ ಭದ್ರತಾ ಸಿಬ್ಬಂದಿ ಗುಂಡಿನ ದಾಳಿ ನಡೆಸಿದರು. ಘಟನೆಯಲ್ಲಿ ಇಬ್ಬರು ಉಗ್ರರು ಹತರಾಗಿದ್ದಾರೆ. ಉಗ್ರರ ಗುರುತು ಪತ್ತೆ ಮಾಡಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು